ರಸ್ತೆ ಕಾಮಗಾರಿಗೆ ಭೂಮಿ ಪೂಜೆ

ಬುಧವಾರ, ಮೇ 22, 2019
24 °C

ರಸ್ತೆ ಕಾಮಗಾರಿಗೆ ಭೂಮಿ ಪೂಜೆ

Published:
Updated:

ಯಮಕನಮರಡಿ: `ಗ್ರಾಮಸ್ಥರ ಬಹು ದಿನಗಳ ಬೇಡಿಕೆಯಾದ ಮುಖ್ಯ ರಸ್ತೆ ಕಾಮಗಾರಿ ಕನಸು ಈಗ ಈಡೇರುತ್ತಿದೆ. ಅದರ ಸದುಪಯೋಗ ಮಾಡಿಕೊಳ್ಳಬೇಕು~ ಎಂದು ಶಾಸಕ ಸತೀಶ ಜಾರಕಿಹೊಳಿ ತಿಳಿಸಿದರು.ಇಲ್ಲಿಗೆ ಸಮೀಪದ ಹೊಸವಂಟಮೂರಿ ಗ್ರಾಮದ ಮುಖ್ಯ ರಸ್ತೆ ಕಾಂಕ್ರೀಟ್ ರಸ್ತೆ  ಗೆ 50-50 ಯೋಜನೆಯಡಿಯಲ್ಲಿ ಸುಮಾರು 7ಲಕ್ಷ 50 ಸಾವಿರ ರೂಪಾಯಿ ವೆಚ್ಚದ ಕಾಮಗಾರಿಗೆ   ಚಾಲನೆ ನೀಡಿ ಅವರು ಮಾತನಾಡಿದರು.ಗ್ರಾಮದಲ್ಲಿ ಈ ಹಿಂದೆ ಮಾಜಿ ಮುಖ್ಯ ಮಂತ್ರಿ  ಎಚ್.ಡಿ. ಕುಮಾರಸ್ವಾಮಿ ಅವರ ಅಧಿಕಾರ ಅವಧಿಯಲ್ಲಿ ಮಂಜೂರಾದ ಕುಡಿಯುವ ನೀರಿನ ಯೋಜನೆಯು ನೆನಗುದಿಗೆ ಬಿದ್ದಿದ್ದು, ಅದನ್ನು ಸರಿಯಾಗಿ ವಿಚಾರಣೆ ಮಾಡಿ, ಬರುವ ದಿನಗಳಲ್ಲಿ ಗ್ರಾಮದ ಜನರಿಗೆ ಸಮರ್ಪಕವಾಗಿ ಕುಡಿರಯುವ ನೀರು ಬಿಡಲು ನಾವು ಪ್ರಯತ್ನ ಮಾಡುತ್ತೇವೆ ಎಂದು ಭರವಸೆ ನೀಡಿದರು.ಲಗಮಣ್ಣಾ ಪಾಟೀಲ ಭೂಮಿ ಪೂಜೆ ನೇರವೇರಿಸಿದರು. ವಂಟಮೂರಿ ತಾ.ಪಂ ಸದಸ್ಯ ರಾಮಾಣ್ಣಾ ಗುಳ್ಳಿ, ಗ್ರಾಪಂ ಅಧ್ಯಕ್ಷ ಮಹಾದೇವ ಬನ್ನಿಬಾಗಿ, ಸುರೇಶ ನಾಯಿಕ, ರಾಜೇಂದ್ರ ತುಬಚಿ, ಮಾರುತಿ ಗುಟಗುದ್ದಿ, ಬಿರಾದಾರ ಗೌಡರ, ಎಸ್.ಎ. ಬಾದಾಮಿ ಮುಂತಾದವರು ಪಾಲ್ಗೊಂಡಿದ್ದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry