ಚಾಮರಾಜನಗರ: ತಾಲ್ಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಬುಧವಾರ ಗುದ್ದಲಿ ಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಶಾಸಕ, ಗ್ರಾಮದ ರಸ್ತೆ ಅಭಿವೃದ್ಧಿಗೆ 2.5 ಲಕ್ಷ ರೂಪಾಯಿ ಮಂಜೂರು ಆಗಿದೆ. ಅಲ್ಲದೆ ಎಸ್ಸಿಪಿ ಯೋಜನೆಯಡಿ 3 ಲಕ್ಷ ವೆಚ್ಚದಲ್ಲಿ ಸಿಮೆಂಟ್ ರಸ್ತೆ, ಚರಂಡಿ ನಿರ್ಮಾಣ ಮಾಡಿಸಲಾಗಿದ್ದು. ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಹಂತ ಹಂತವಾಗಿ ಗ್ರಾಮದ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದ ಶಾಸಕರು, ಗ್ರಾಮಸ್ಥರ ಕೋರಿಕೆ ಮೇರೆಗೆ ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ಕೊಡುವುದಾಗಿ ಹೇಳಿದರು.

ಜಿ.ಪಂ.ಸದಸ್ಯೆ ನಾಗಶ್ರೀ ಮಾತನಾಡಿ, ಶಿವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿಗೆ ತಮ್ಮ ಅನುದಾನದಲ್ಲಿ 10 ಲಕ್ಷ ರೂಪಾಯಿ ಮಂಜೂರು ಮಾಡಲಾಗಿದ್ದು, ಅದರಲ್ಲಿ ಮಲ್ಲಯ್ಯನಪುರ ಗ್ರಾಮದ ರಸ್ತೆ ಅಭಿವೃದ್ಧಿಗೆ ರೂ. 2.5 ಲಕ್ಷ ನೀಡಲಾಗಿದೆ ಎಂದರು.

ಗ್ರಾ.ಪಂ.ಅಧ್ಯಕ್ಷ ರಾಜು, ಉಪಾಧ್ಯಕ್ಷೆ ಮಂಗಳಮ್ಮ, ಸದಸ್ಯೆ ಮಹದೇವಮ್ಮ ಮಾಜಿ ಅಧ್ಯಕ್ಷ ನಾಗಣ್ಣೇಗೌಡ, ತಾ.ಪಂ.ಮಾಜಿ ಸದಸ್ಯ ಮಲ್ಲೇ ದೇವರು, ನಂಜುಂಡಸ್ವಾಮಿ ಇದ್ದರು.

ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ
ನಗರದ ರಾಮಸಮುದ್ರದ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆಯಲ್ಲಿ ಸುದೀಪ್ ಅಭಿಮಾನಿಗಳ ವೇದಿಕೆ ವತಿಯಿಂದ ಗೌರಿ- ಗಣೇಶ ಹಾಗೂ ನಟ ಸುದೀಪ್ ಜನ್ಮ ದಿನಾಚರಣೆ ಪ್ರಯುಕ್ತ ಬಡ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಉಚಿತ ನೋಟ್ಬುಕ್ ವಿತರಣೆ ಕಾರ್ಯಕ್ರಮವನ್ನು ಎಸ್ಐ ಜನಾರ್ದನ ಉದ್ಘಾಟಿಸಿದರು.

ಚೂಡಾ ಮಾಜಿ ಅಧ್ಯಕ್ಷ ಎಂ. ರಾಮಚಂದ್ರು ಬಡ ವಿದ್ಯಾರ್ಥಿಗಳಿಗೆ ಉಚಿತ ನೋಟ್ಬುಕ್ ವಿತರಿಸಿ, . ಸರ್ಕಾರದ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಅಧ್ಯಕ್ಷತೆಯನ್ನು ಮುಖ್ಯ ಶಿಕ್ಷಕಿ ಮಂಗಳ ಗೌರಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯ ಮಹಮದ್ ಅಸ್ಗರ್, ವೇದಿಕೆ ಅಧ್ಯಕ್ಷ ಬಂಗಾರು, ಕಪಿನಿನಾಯಕ, ಪುಟ್ಟರಾಜು, ನಾಗಣ್ಣ, ರಂಗಸ್ವಾಮಿ, ಬಂಗಾರ ನಾಯಕ, ಮಹದೇ ಸ್ವಾಮಿ, ಮಹೇಶ, ಪುನೀತ್, ಶಿಕ್ಷಕರಾದ ಲಿಂಗರಾಜು, ನಾಗರತ್ನಮ್ಮ, ವಸಂತಕುಮಾರಿ, ಬಿ.ಪಾರ್ವತಿ, ಶರ್ಮಿಳ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.