ಮಂಗಳವಾರ, ಏಪ್ರಿಲ್ 20, 2021
26 °C

ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಎಚ್.ಡಿ.ಕೋಟೆ: ಪಟ್ಟಣದ 1ನೇ ಮುಖ್ಯ ರಸ್ತೆ ವಿಸ್ತರಣೆ ಕಾಮಗಾರಿ ಸಂದರ್ಭದಲ್ಲಿ ಮುಂಜಾಗ್ರತೆ ಕ್ರಮ ಕೈಗೊಳ್ಳದಿರುವುದರಿಂದ ಹಲವಾರು ಸಮಸ್ಯೆಗಳು ಎದುರಾಗಿವೆ. ಈ ಲೇನ್‌ನ ಎಲ್ಲ ನಲ್ಲಿ ಪೈಪುಗಳು ಒಡೆದಿದ್ದು, ಕುಡಿಯುವ ನೀರಿಗಾಗಿ ಸಾರ್ವಜನಿಕರು ಪರದಾಡುವಂತಾಗಿದೆ. ಚರಂಡಿ ಕಾಮಗಾರಿಗೆ ತೆಗೆದಿರುವ ಗುಂಡಿಯಿಂದಾಗಿ ವಿದ್ಯುತ್‌ಕಂಬಗಳುವಾಲಿವೆ. ಕೆಳಭಾಗದಲ್ಲಿ ಅಳವಡಿಸಿರುವ ವಿದ್ಯುತ್ ಕೇಬಲ್‌ಗಳಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸುವ ಸಾಧ್ಯತೆಯೂ ಇದೆ. ಇಲ್ಲಿ ಹಲವು ಮನೆಗಳನ್ನು ತೆರವುಗೊಳಿಸಿಲಾಗಿದೆ.ಕೆಲ ಮನೆ ಗೋಡೆಗಳು ದುರ್ಬಲಗೊಂಡಿದ್ದು, ಕುಸಿಯುವ ಹಂತದಲ್ಲಿವೆ. ಹಳೆಯ ಕಟ್ಟಡಗಳಿಗೆ ಪರಿಹಾರ ನೀಡಬೆಕೆಂದು ನಿವಾಸಿಗಳು ಒತ್ತಾಯಿಸಿದ್ದಾರೆ. ಇಲ್ಲಿನ ಶಾಲೆಯ ಕಾಂಪೌಂಡ್ ನೆಲಸಮಗೊಳಿಸಿರುವುದಿರಂದ ವಿದ್ಯಾರ್ಥಿಗಳು ದೂಳಿನಲ್ಲಿ ಪಾಠ ಕೇಳುವಂತೆ ಮಾಡಿದೆ. ಸಮಸ್ಯೆಗಳ ಕುರಿತು ಮಾತನಾಡಿದ ಎಇಇ ಮೋಹನ್‌ಕುಮಾರ್, ಕ್ವಾರೆ ಮಾಲೀಕರು ಪ್ರತಿಭಟನೆ ನಡೆಸುತ್ತಿರುವುದರಿಂದ ರಸ್ತೆ ಕಾಮಗಾರಿಗೆ ಬೇಕಿರುವ ವಸ್ತುಗಳನ್ನು ತರಲು ಸಾಧ್ಯವಾಗುತ್ತಿಲ್ಲ ಆದ್ದರಿಂದ ಕಾಮಗಾರಿ ವಿಳಂಬವಾಗುತ್ತಿದೆ, ಹಾಗೂ ಕುಡಿಯುವ ನೀರಿನ ಪೈಪುಗಳನ್ನು ಹೊಸದಾಗಿ ಅಳವಡಿಸಲಾಗುವುದು. ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸಲಾಗುವುದು ಈ ಎಲ್ಲ ಕೆಲಸ ಆದರೆ ಕಾಮಗಾರಿ ವೇಗವಾಗಿ ಸಾಗುತ್ತದೆ ಎಂದು ‘ಪ್ರಜಾವಾಣಿ’ಗೆ ತಿಳಿಸಿದರು.ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎನ್.ಸಿ. ಜಗದೀಶ್‌ರವರು ಮಾತನಾಡಿ ಕುಡಿಯುವ ನೀರಿನ ಪೈಪ್‌ಲೈನ್‌ಗಾಗಿ ರೂ 7ಲಕ್ಷ ಬಿಡುಗಡೆ ಮಾಡಿದೆ. ವಿದ್ಯುತ್ ಕಂಬ ಸ್ಥಳಾಂತರ, ಮರು ನಿರ್ಮಾಣಕ್ಕೆರೂ 6.5ಲಕ್ಷ ಮಂಜೂರಿಗೆ ಅನುಮೋದನೆ ಕಳುಹಿಸಲಾಗಿದೆ ಎಂದರು. ರಸ್ತೆ ಕಾಮಗಾರಿಯನ್ನು ಶೀಘ್ರ ಪೂರ್ಣ ಗೊಳಿಸಿ ತೊಂದರೆಗಳಿಂದ ಮುಕ್ತಿ ನೀಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.