ಸೋಮವಾರ, ಮೇ 17, 2021
23 °C

ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಒತ್ತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಾಗರ: ತಾಲ್ಲೂಕಿನ ಗ್ರಾಮೀಣ ಪ್ರದೇಶಗಳ ಸಂಪರ್ಕ ರಸ್ತೆ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು ಒತ್ತು ನೀಡಲಾಗುತ್ತಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.ತಾಲ್ಲೂಕಿನ ಮಾಸೂರು ಗ್ರಾಮದಲ್ಲಿ ಸೋಮವಾರ ನಡೆದ ಸಮಾರಂಭದಲ್ಙ್ 99 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಮಾಸೂರು- ಅದರಂತೆ ರಸ್ತೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.ಹಿಂದಿನ ಯಾವ ಸರ್ಕಾರಗಳ ಅವಧಿಯಲ್ಲೂ ಮಂಜೂರಾಗದಷ್ಟು ಅಧಿಕ ಪ್ರಮಾಣದ ಹಣ ತಾಲ್ಲೂಕಿನ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಬಿಡುಗಡೆಯಾಗಿದೆ. ಕಾಮಗಾರಿಗಳ ಗುಣಮಟ್ಟವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಎಚ್ಚರ ವಹಿಸಲಾಗುತ್ತಿದೆ. ಈ ಬಗ್ಗೆ ಯಾವುದೆ ದೂರುಗಳು ಬಂದಲ್ಲಿ ಸಂಬಂಧಪಟ್ಟ ಗುತ್ತಿಗೆದಾರರು ಹಾಗೂ ಎಂಜಿನಿಯರ್ ಮೇಲೆ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.ಜಿಲ್ಲಾ ಪಂಚಾಯ್ತಿ ಸದಸ್ಯೆ ಸುಮಂಗಲಾ ರಾಮಕೃಷ್ಣ ಮಾತನಾಡಿ, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿಗಳಿಗೆ ಅನುದಾನದ ಕೊರತೆ ಇರುವುದರಿಂದ ಜನಪ್ರತಿನಿಧಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಸರ್ಕಾರ ಅನುದಾನದ ಪ್ರಮಾಣವನ್ನು ಹೆಚ್ಚಿಸುವ ಮೂಲಕ ಈ ಸ್ಥಳೀಯ ಸಂಸ್ಥೆ ಬಲಪಡಿ ಸಬೇಕು ಎಂದು ಒತ್ತಾಯಿಸಿದರು.ಮಾಸೂರು ಗ್ರಾಮ ಪಂಚಾಯ್ತಿ ಅಧ್ಯಕ್ಷ ಕೆ. ಪ್ರಕಾಶ್  ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಪಂಚಾಯ್ತಿ ಸದಸ್ಯೆ ಶ್ವೇತಾ ಉಮೇಶ್ ಕಾಗೋಡು, ಗ್ರಾಮ ಪಂಚಾಯ್ತಿ ಸದಸ್ಯರಾದ ಚೌಡಪ್ಪ ಮೆಳವರಿಗೆ, ವೀಣಾ ಮಾಸೂರು, ಆರಾಧನಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಅದರಂತೆ, ಬಗರ್‌ಹುಕುಂ ಸಮಿತಿ ಸದಸ್ಯ ಆರ್.ಸಿ. ಮಂಜುನಾಥ್, ಮಹಾಬಲೇಶ್ವರ್  ಹಾಜರಿದ್ದರು. ಮನವಿ

ಇಲ್ಲಿನ ನಗರಸಭಾ ಸದಸ್ಯರು ಹಾಗೂ ವಿವಿಧ ಸಂಘಟನೆಗಳ ಪ್ರಮುಖರು ಸಾರ್ವಜನಿಕ ಜೀವನದಲ್ಲಿರುವ ವ್ಯಕ್ತಿಗಳನ್ನು ಬ್ಲಾಕ್‌ಮೇಲ್ ಮಾಡುತ್ತಿರುವ ಪತ್ರಕರ್ತರ ವಿರುದ್ದ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಸೋಮವಾರ ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.ನಗರದಲ್ಲಿ ಸಾಮಾಜಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವ್ಯಕ್ತಿಗಳನ್ನು ಬೆರಳೆಣಿಕೆಯ ಪತ್ರಕರ್ತರು ನಿರಂತರವಾಗಿ ಬೆದರಿಸುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿದ್ದಾರೆ. ತಮಗೆ ರಾಜಕೀಯ ವ್ಯಕ್ತಿಗಳ ಹಾಗೂ ಅಧಿಕಾರಿಗಳ ಬೆಂಬಲ ಇದೆ ಎಂದು ಹೇಳಿಕೊಳ್ಳುವ ಇಂತಹ ಪತ್ರಕರ್ತರನ್ನು ನಿಯಂತ್ರಿಸದೇ ಇದ್ದರೆ ಸಮಾಜದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣವಾಗಲಿದೆ ಎಂದು ಮನವಿಯಲ್ಲಿ ಹೇಳಲಾಗಿದೆ.ಕೆಲವು ಪತ್ರಕರ್ತರು ಸಾಮಾಜಿಕ ಕ್ಷೇತ್ರದಲ್ಲಿರುವ ಕೆಲವು ವ್ಯಕ್ತಿಗಳ ತೇಜೋವಧೆ ಮಾಡಬೇಕು ಎಂಬ ಉದ್ದೇಶದಿಂದ ಅವಹೇಳನಾಕಾರಿ ಬರಹ ಪ್ರಕಟಿಸುತ್ತಿದ್ದು ಈಚೆಗೆ ನಗರಸಭಾ ಸದಸ್ಯರೊಬ್ಬರು ಈ ಬೆಳವಣಿಗೆಯಿಂದ ನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿರುವ ಘಟನೆ ನಡೆದಿರುವುದನ್ನು ಮನವಿಯಲ್ಲಿ ಉಲ್ಲೇಖಿಸಲಾಗಿದೆ.ಪತ್ರಿಕೋದ್ಯಮದ ಮೌಲ್ಯಗಳನ್ನು ಧಿಕ್ಕರಿಸಿ ಸಾರ್ವಜನಿಕರನ್ನು ಹೆದರಿಸಿ ಬೆದರಿಸುವ ಪ್ರವೃತ್ತಿಯ ಪತ್ರಕರ್ತರ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಮತ್ತು ಅಂತಹ ಪತ್ರಿಕೆಗಳ ಪರವಾನಿಗೆ ರದ್ದುಗೊಳಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.ನಗರಸಭಾ ಸದಸ್ಯರಾದ ಎಸ್.ವಿ. ಕೃಷ್ಣಮೂರ್ತಿ, ಡಿ.ಎಸ್. ಸುಧೀಂದ್ರ, ನಾಗರಾಜ ಸುಬ್ರು, ಸಂತೋಷ ಶೇಟ್, ಬಿ.ಎಸ್. ಕುಮಾರ್, ಗಂಗಮ್ಮ, ಜೆಡಿಎಸ್ ಮುಖಂಡ ದಳವಾಯಿ ದಾನಪ್ಪ, ರೇಖಾ ಕೆಂಬಾವಿ, ಉಮಾ ಉಮೇಶ್, ವೀರಭದ್ರಪ್ಪ ಜಂಬಿಗೆ, ನಾಗರಾಜ ಕೆಂಬಾವಿ, ಗಂಗಾಧರ ಜಂಬಿಗೆ, ಪಾರ್ವತಮ್ಮ, ಸಣ್ಣಯ್ಯ, ಗೋಪಾಲ ಇನ್ನಿತರರು ಭಾಗವಹಿಸಿದ್ದರು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.