ಶುಕ್ರವಾರ, ಮೇ 27, 2022
22 °C

ರಸ್ತೆ ಕಾಮಗಾರಿ ವರ್ಷದಲ್ಲಿ ಪೂರ್ಣ: ಕೃಷ್ಣ ಬೈರೇಗೌಡ ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಲಹಂಕ: `ಬೆಟ್ಟಹಲಸೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಐದು ವರ್ಷಗಳಲ್ಲಿ ಒಂದು ಗ್ರಾಮದಿಂದ ಇನ್ನೊಂದು ಗ್ರಾಮಕ್ಕೆ ತೆರಳುವ ಸಂಪರ್ಕ ರಸ್ತೆ ಹಾಗೂ ಊರೊಳಗಿನ ಕಾಂಕ್ರೀಟ್ ರಸ್ತೆಗಳನ್ನು ಶೇ 70ರಷ್ಟು ಅಭಿವೃದ್ಧಿಗೊಳಿಸಲಾಗಿದೆ. ಬಾಕಿಯಿರುವ ಕಾಮಗಾರಿಯನ್ನು ವರ್ಷದೊಳಗೆ ಪೂರ್ಣಗೊಳಿಸಲಾಗುವುದು' ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದರು.ಬ್ಯಾಟರಾಯನಪುರ ಕ್ಷೇತ್ರ ವ್ಯಾಪ್ತಿಯ  ಬೆಟ್ಟಹಲಸೂರು ಗ್ರಾಮದಲ್ಲಿ ಈಚೆಗೆ ಆಯೋಜಿಸಿದ್ದ ಗ್ರಾಮಸಭೆಯನ್ನು ಉದ್ಘಾಟಿಸಿ ಮಾತನಾಡಿದರು.ವಿಧವಾ ವೇತನ ಆದೇಶ ಪತ್ರ, ಪರಿಶಿಷ್ಟ ಜಾತಿ-ಪಂಗಡದವರಿಗೆ 22.75 ರಡಿಯಲ್ಲಿ ವಿದ್ಯುತ್ ಮೀಟರ್, ವಸತಿ ಜನೆಯಡಿಯಲ್ಲಿ ಮನೆಗಳನ್ನು ನಿರ್ಮಿಸಿಕೊಳ್ಳಲು ಸಹಾಯಧನದ ಚೆಕ್ ಮತ್ತು ತೋಟಗಾರಿಕೆ ಇಲಾಖೆ ವತಿಯಿಂದ ಟಾರ್ಪಾಲ್ ಹಾಗೂ ಕೃಷಿ ಯಂತ್ರೋಪಕರಣಗಳನ್ನು ವಿತರಿಸಲಾಯಿತು.ಜಿ. ಪಂ. ಸದಸ್ಯ ಕೆ.ಅಶೋಕನ್, ದಾನೇಗೌಡ, ತಾಲ್ಲೂಕು ಪಂಚಾಯ್ತಿ ಉಪಾಧ್ಯಕ್ಷೆ ಅರುಣಾ ಮಂಜುನಾಥ್, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಅಕ್ಕಯ್ಯಮ್ಮ, ಉಪಾಧ್ಯಕ್ಷ ಕೆ.ಎನ್.ಅಶ್ವಥ್, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಬಿ.ಮಮತಾ, ಕಾರ್ಯದರ್ಶಿ ಎಸ್.ಡಿ.ರಂಗಸ್ವಾಮಿ, ಕಾಂಗ್ರೆಸ್ ಮುಖಂಡ ನರಸಿಂಹಮೂರ್ತಿ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.