ಗುರುಮಠಕಲ್: ಪಟ್ಟಣದಿಂದ ಚಂಡ್ರಕಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಕಾಮಗಾರಿ ಸ್ಥಗಿತಗೊಂಡಿದ್ದು, ಜನರು ಪರದಾಡುವಂತಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಬಾಬು ರಾವ್ ಚಿಂಚನಸೂರು, ಕಳೆದ ಮಾರ್ಚ್ ನಲ್ಲಿ ಈ ರಸ್ತೆ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿದ್ದರು. ಅಲ್ಪಸ್ವಲ್ಪ ಕಾಮಗಾರಿ ಮಾಡಿ, ಇದೀಗ ಸ್ಥಗಿತಗೊಳಿಸಲಾಗಿದೆ ಎಂದು ಜನರು ದೂರುತ್ತಿದ್ದಾರೆ.

ಲೋಕೋಪಯೋಗಿ ಇಲಾಖೆಯು ಕಾಮಗಾರಿ ಕೈಗೆತ್ತಿಕೊಂಡಿದೆ. ಈಗಾಗಲೇ ರಸ್ತೆ ಕಾಮಗಾರಿ ಕೈಗೊಳ್ಳಲು ಕಂಕರ್ ಹಾಕಲಾಗಿದೆ. ಆರಂಭದಲ್ಲಿ ರಸ್ತೆ ಕಾಮ ಗಾರಿ ನಡೆದಿತ್ತು. ಇಲಾಖೆ ಅಧಿಕಾರಿಗಳು ಕಳಪೆ ಕಾಮಗಾರಿ ಕೈಗೊಳ್ಳುತ್ತಿದ್ದು, ಯುವ ಜೆಡಿಎಸ್ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಶರಣಗೌಡ ಕಂದುಕೂರ, ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ್ದರು. ಅಧಿಕಾರಿಗಳ ಭೇಟಿ ನಂತರ ಮತ್ತೆ ರಸ್ತೆ ಕಾಮಗಾರಿ ಕೈಗೊಳ್ಳಬಹುದಿತ್ತು.

ಆದರೆ ಅಧಿಕಾರಿಗಳು ವಿವಿಧ ಕಾರಣಗ ಳನ್ನು ಹೇಳಿ ರಸ್ತೆ ಕಾಮಗಾರಿ ಸ್ಥಗಿತಗೊ ಳಿಸಿದ್ದಾರೆ. ಇದರಿಂದ ಕಿತ್ತು ಹೋದ ರಸ್ತೆ ಮೂಲಕವೇ ದಿನ ನಿತ್ಯ ಪ್ರಯಾಣ ಮಾಡ ಬೇಕಾದ ಅನಿವಾರ್ಯತೆ ತಲೆದೋರಿದೆ. ಕಳೆದ ಎರಡು ತಿಂಗಳಿನಿಂದ ರಸ್ತೆ ಕಾಮ ಗಾರಿ ಕೈಗೊಳ್ಳದೇ ನಿರ್ಲಕ್ಷ್ಯ ತೋರ ಲಾಗಿದೆ. ಅಧಿಕಾರಿಗಳು ಕುಂಟು ನೆಪ ಹೇಳದೇ ಬೇಗ ಮತ್ತೆ ಕಾಮಗಾರಿ ಆರಂಭಿಸಬೇಕು. ಗುಣಮಟ್ಟದ ರಸ್ತೆ ನಿರ್ಮಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.