ಸೋಮವಾರ, ಜೂನ್ 14, 2021
28 °C

ರಸ್ತೆ ಕಾಮಗಾರಿ: ಹೆಚ್ಚಿನ ಅನುದಾನ ಪ್ರಯತ್ನ- ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ಲೋಕೋಪಯೋಗಿ ಇಲಾಖೆಯಿಂದ ಗುಲ್ಬರ್ಗ ಜಿಲ್ಲೆಯಲ್ಲಿ ಕೈಗೆತ್ತಿಕೊಂಡ ಎಲ್ಲ ರಸ್ತೆ ಕಾಮಗಾರಿಗಳನ್ನು ತೀವ್ರಗತಿಯಲ್ಲಿ ಪೂರ್ಣಗೊಳಿಸಲು ಬೇಕಾಗುವ ಅಗತ್ಯ ಅನುದಾನಕ್ಕಾಗಿ ಸರ್ಕಾರದ ಮಟ್ಟದಲ್ಲಿ ಹೆಚ್ಚು ಪ್ರಯತ್ನ ಮಾಡಬೇಕೆಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದೀಪಕನಾಗ ಪುಣ್ಯಶೆಟ್ಟಿ  ಹೇಳಿದರು.

ಅವರು ಸೋಮವಾರ ಗುಲ್ಬರ್ಗದಲ್ಲಿ ಜಿಲ್ಲಾ ಮಟ್ಟದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯಲ್ಲಿ ಕೈಗೆತ್ತಿಕೊಳ್ಳಲಾಗುವ ರಸ್ತೆ ಕಾಮಗಾರಿಗಳ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸುವ ಮುನ್ನ ಜಿಪಂ ಅವಗಾಹನೆಗೆ ತರಬೇಕು ಹಾಗೂ ವಿವಿಧ ಪ್ರಗತಿ ಹಂತದ ಕಾಮಗಾರಿಗಳ ವರದಿಯನ್ನು ಸಲ್ಲಿಸಬೇಕು.ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದಿಂದ 2008-09ರಿಂದ 2010-11ರವರೆಗಿನ ಅವಧಿಯಲ್ಲಿ ವಿವಿಧ ಯೋಜನೆಗಳ ಅಡಿಯಲ್ಲಿ ಕೈಗೆತ್ತಿಕೊಂಡ 249 ಅಂಗನವಾಡಿ ಕಟ್ಟಗಳ ಪೈಕಿ ಕೇವಲ 116 ಕಟ್ಟಡಗಳ ಕಾಮಗಾರಿ ಪೂರ್ಣಗೊಂಡಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅಧ್ಯಕ್ಷರು, ಬಾಕಿ ಉಳಿದ ಕಟ್ಟಡಗಳ ಕಾಮಗಾರಿಗಳನ್ನು ಬರುವ ಮೇ 15ರೊಳಗೆ ಮುಗಿಸುವಂತೆ ಸೂಚಿಸಿದರು.ಆಳಂದ ತಾಲ್ಲೂಕಿನ ಖಜೂರಿ ಪ್ರಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯ ಕರ್ತವ್ಯಕ್ಕೆ ಗೈರುಹಾಜರಿ       ಮತ್ತು ಕರ್ತವ್ಯಲೋಪದ ಬಗ್ಗೆ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷೆ ಜಯಶ್ರೀ ಸಾವಳೇಶ್ವರ ಗಮನಕ್ಕೆ ತಂದಾಗ ಜಿಲ್ಲಾ ಆರೋಗ್ಯಾಧಿಕಾರಿಗಳು ಸದರಿ ವೈದ್ಯಾಧಿಕಾರಿಗಳ ಬಗ್ಗೆ  ಖುದ್ದಾಗಿ ವಿಚಾರಣೆ ನಡೆಸಿ ಸೂಕ್ತ ಕ್ರಮ ಜರುಗಿಸಬೇಕೆಂದು   ಸೂಚಿಸಿದರು.ಅಧಿಕಾರಿಗಳೇ ಹೊಣೆ: ಸರ್ಕಾರದ ಎಲ್ಲ ಇಲಾಖೆಗಳಿಗೆ 2011-12ನೇ ಆರ್ಥಿಕ ಸಾಲಿನಲ್ಲಿ ನಿಗದಿಪಡಿಸಿದ ಆರ್ಥಿಕ ಮತ್ತು ಭೌತಿಕ ಗುರಿಯ ಶೇ. 100ರಷ್ಟು ಪ್ರಗತಿ ಸಾಧಿಸುವುದು ಕಡ್ಡಾಯವಾಗಿದ್ದು, ಶೇ. 100ರಷ್ಟು ಪ್ರಗತಿ ಸಾಧಿಸದ ಆಯಾ ಇಲಾಖೆಗಳ ಜಿಲ್ಲಾ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದೆಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಜಿ. ವಿಜಯಕುಮಾರ ಹೇಳಿದರು.ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ ಫೆಬ್ರುವರಿ ಅಂತ್ಯದವರೆಗೆ ಜಿಲ್ಲೆಯಲ್ಲಿ 33.64 ಕಿ.ಮೀ. ರಸ್ತೆ ನಿರ್ಮಿಸಿದ್ದು, 14.49 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂದು ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್  ತಿಳಿಸಿದರು.ಜಿಪಂ ಉಪಾಧ್ಯಕ್ಷ ನಿತಿನ್ ಗುತ್ತೇದಾರ್, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ ಮರಗೋಳ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಜಿ.ವಿಜಯಕುಮಾರ, ಮುಖ್ಯ ಯೋಜನಾಧಿಕಾರಿ ಎಸ್.ಬಸವರಾಜ್, ಉಪಕಾರ್ಯದರ್ಶಿ ವಸಂತ ಕುಲಕರ್ಣಿ, ಡಿ.ಆರ್.ಡಿ.ಎ. ಯೋಜನಾ ನಿರ್ದೇಶಕ ಕೆಂಚಣ್ಣನವರ್, ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯ ಚರ್ಚೆಯಲಿ ್ಲಪಾಲ್ಗೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.