ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ

7

ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ

Published:
Updated:ಬೇಲೂರು:
ಪಟ್ಟಣದ ಚನ್ನಕೇಶವಸ್ವಾಮಿ ದೇವಾಲಯದ ಹಿಂಭಾಗದಲ್ಲಿನ ಮೂಡಿಗೆರೆ ರಸ್ತೆಗೆ ಸಂಪರ್ಕ ಕಲ್ಪಿಸುವ ಹಾಗೂ ರಸ್ತೆ ದುರಸ್ತಿಪಡಿಸುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಸೋಮವಾರ ಪತ್ರಿಭಟನೆ ನಡೆಸಿದರು.ಜಯಕರ್ನಾಟಕ ಸಂಘಟನೆ, ರೈತಸಂಘ, ದಲಿತ ಸಂಘರ್ಷ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಹಲವು ವರ್ಷಗಳಿಂದ ಗುಂಡಿ ಬಿದ್ದು ಸಂಪೂರ್ಣ ಹಾಳಾಗಿರುವ ರಸ್ತೆ ದುರಸ್ತಿಪಡಿಸಲು ವಿಫಲವಾಗಿರುವ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು. ಕೆಲ ಕಾಲ ರಸ್ತೆ ತಡೆ ನಡೆಸಿ ಸಂಚಾರಕ್ಕೆ ಅಡ್ಡಿ ಪಡಿಸಿದರು.ಜೆಡಿಎಸ್ ಮುಖಂಡ ಸುದರ್ಶನ್ ಮಾತನಾಡಿ, ಈ ರಸ್ತೆಯಲ್ಲಿ ಎರಡು ಶಾಲೆಗಳಿವೆ. ಮೂಡಿಗೆರೆ ಮಾರ್ಗದಿಂದ ದೇವಾಲಯಕ್ಕೆ ಬರಬೇಕಾದ ಪ್ರವಾಸಿಗರು ಇದೇ ರಸ್ತೆಯಲ್ಲಿ ಬರಬೇಕಾಗಿದೆ. ದೇವಾಲಯಕ್ಕೆ ಸಮೀಪದಲ್ಲಿಯೇ ಈ ರಸ್ತೆ ಇದ್ದರೂ ಇಲ್ಲಿಯವರೆಗೆ ಗುಂಡಿ ಮುಚ್ಚಲು ಯಾವುದೇ ಕ್ರಮ ಕೈಗೊಂಡಿಲ್ಲ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಈ ವಿಚಾರದಲ್ಲಿ ದಿವ್ಯ ನಿರ್ಲಕ್ಷ್ಯ ತೆಳೆದಿರುವುದು ಖಂಡನೀಯ. ಈ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳದಿದ್ದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಸುರೇಶ್ ಸ್ಥಳಕ್ಕೆ ಆಗಮಿಸಿ ರಸ್ತೆಯನ್ನು ಶೀಘ್ರ ದುರಸ್ತಿ ಪಡಿಸುವ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂತೆಗೆದುಕೊಳ್ಳಲಾಯಿತು. ಜಯಕರ್ನಾಟಕ ಸಂಘಟನೆ ಅಧ್ಯಕ್ಷ ಅರುಣ್‌ಕುಮಾರ್, ದಲಿತ ಸಂಘರ್ಷ ಸಮಿತಿಯ ಲಕ್ಷ್ಮಣ್, ಬೋಜೇಗೌಡ, ತೀರ್ಥಂಕರ್, ಸ್ವಾಮಿಗೌಡ ಹಾಜರಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry