ಶುಕ್ರವಾರ, ಮೇ 27, 2022
22 °C

ರಸ್ತೆ ದುರಸ್ತಿ ಪಡಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕನಕಪುರ ರಸ್ತೆಯ ರಘುವನಹಳ್ಳಿ ಅಡಿಗಾಸ್ ಹೋಟೆಲ್ ಮುಂದಿರುವ ರಸ್ತೆ ಗುಂಡಿ ಯಾರನ್ನಾದರೂ ಬಲಿ ತೆಗೆದುಕೊಳ್ಳಲು ಕಾದಿರುವಂತಿದೆ. ಕಳೆದ ಮೂರು ನಾಲ್ಕು ತಿಂಗಳುಗಳಿಂದ ರಸ್ತೆ ಹಾಳಾಗಿದ್ದರೂ ರಸ್ತೆಯ ದುರಸ್ತಿಗೆ ಅಧಿಕಾರಿಗಳು ಮುಂದಾಗಿಲ್ಲ' ಎಂದು ಕನಕಪುರ ರಸ್ತೆಯ ಬಾಲಾಜಿ ಬಡಾವಣೆ ನಿವಾಸಿ ವಿ.ಕೆ.ಶ್ರೀವತ್ಸ ದೂರಿದ್ದಾರೆ.`ಇಲ್ಲಿ ಗುಂಡಿಗಳ ಮಧ್ಯೆ ರಸ್ತೆಯನ್ನು ಹುಡುಕಬೇಕಿದೆ. ನಿತ್ಯ ಸುಮಾರು  ಮೂರು ಲಕ್ಷ ವಾಹನಗಳು ಸಂಚರಿಸುವ ಈ ಪ್ರಮುಖ ರಸ್ತೆಯ ನಿರ್ವಹಣೆಗೆ ಬಿಬಿಎಂಪಿ ಅಧಿಕಾರಿಗಳು ಮುಂದಾಗಿಲ್ಲ. ರಸ್ತೆಯಲ್ಲಿ ನಿತ್ಯ ಐದಾರು ಮಂದಿ ಬೈಕ್ ಸವಾರರು ರಸ್ತೆಯ ಗುಂಡಿಗಳಿಂದಾಗಿ ಬಿದ್ದು ಗಾಯಗೊಳ್ಳುವುದು ಸಾಮಾನ್ಯವಾಗಿದೆ. ರಸ್ತೆಯಲ್ಲಿ ಯಾವುದಾದರು ಭಾರಿ ಅವಘಡ ಸಂಭವಿಸುವ ಮುನ್ನ ಅಧಿಕಾರಿಗಳು ರಸ್ತೆಯನ್ನು ದುರಸ್ತಿಗೊಳಿಸಬೇಕು' ಎಂದು ಅವರು ಒತ್ತಾಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.