ಬುಧವಾರ, ಏಪ್ರಿಲ್ 14, 2021
31 °C

ರಸ್ತೆ ನಿರ್ಮಾಣಕ್ಕೆ ಸಹಕರಿಸಲು ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಿಗೆ ಸಂಪರ್ಕ ರಸ್ತೆಗಳನ್ನು ಕಲ್ಪಿಸುವ ಅಗತ್ಯವಿದ್ದು, ರಸ್ತೆ ಪಕ್ಕದಲ್ಲಿ ಕೆಲ ಅಡಿಗಳಷ್ಟು ಜಮೀನು ಬಿಟ್ಟುಕೊಡುವುದರ ಮೂಲಕ ಜಮೀನ್ದಾರರು ಸಹಕರಿಸಬೇಕು ಎಂದು ಶಾಸಕ ಕೆ.ಪಿ.ಬಚ್ಚೇಗೌಡ ತಿಳಿಸಿದರು.ತಾಲ್ಲೂಕಿನ ಮಂಡಿಕಲ್ ಹೋಬಳಿಯ ನಲ್ಲರಾಳಹಳ್ಳಿ ಗ್ರಾಮದಲ್ಲಿ ಸುಮಾರು ಒಂದು ಕೋಟಿ ರೂಪಾಯಿ ವೆಚ್ಚದ ರಸ್ತೆ ಕಾಮಗಾರಿಗೆ ಸೋಮವಾರ ಚಾಲನೆ ನೀಡಿ ಮಾತನಾಡಿದ ಅವರು, ‘ಗ್ರಾಮೀಣ ಪ್ರದೇಶಗಳಲ್ಲಿ ಅದರಲ್ಲೂ ಕುಗ್ರಾಮಗಳಲ್ಲಿ ಮೂಲಸೌಕರ್ಯ ಕಲ್ಪಿಸಲು ರಸ್ತೆಯ ಅಗತ್ಯವಿದೆ. ಗ್ರಾಮಸ್ಥರು ಸಹಕರಿಸಬೇಕು’ ಎಂದರು.ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ನಲ್ಲಾರಳಹಳ್ಳಿ ಗ್ರಾಮದಲ್ಲಿ 4 ರಿಂದ 10 ಕಿ.ಮೀ ಉದ್ದನೆಯ ರಸ್ತೆ ನಿರ್ಮಿಸಲಾಗುತ್ತಿದ್ದು, ಇದು ಇತರ ಗ್ರಾಮಗಳಿಗೂ ಸಂಪರ್ಕ ರಸ್ತೆಯಾಗಲಿದೆ. ಈ ಭಾಗದ ಜನರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.ರಸ್ತೆ ನಿರ್ಮಾಣಗೊಂಡ ನಂತರ ಅದರ ನಿರ್ವಹಣೆ ಮತ್ತು ಸದ್ಬಳಕೆಯಲ್ಲೂ ಗ್ರಾಮಸ್ಥರು ಪ್ರಮುಖ ಪಾತ್ರವಹಿಸಬೇಕು. ಯಾವುದೇ ಕಾರಣಕ್ಕೂ ರಸ್ತೆಗಳು ಹಾಳಾಗಲು ಅವಕಾಶ ನೀಡಬಾರದು. ಗ್ರಾಮಸ್ಥರು ಎಚ್ಚರ ವಹಿಸಿದ್ದಲ್ಲಿ, ಉತ್ತಮ ಗುಣಮಟ್ಟದ ರಸ್ತೆಯನ್ನು ದೀರ್ಘ ಕಾಲದವರೆಗೆ ಕಾಯ್ದುಕೊಳ್ಳಬಹುದು ಎಂದು ಅವರು ಹೇಳಿದರು.ಮಂಡಿಕಲ್ ಹೋಬಳಿಯ ಸುತ್ತಮುತ್ತಲ ಪ್ರದೇಶದಲ್ಲಿ ರೂ.55 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಎಲ್ಲ ಕಾಮಗಾರಿಗಳು ಹಂತಹಂತವಾಗಿ ಪೂರ್ಣಗೊಳ್ಳಲಿದ್ದು, ಗ್ರಾಮಸ್ಥರಿಗೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು. ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ವೆಂಕಟನಾರಾಯಣಪ್ಪ,  ಕೆ.ಟಿ.ನಾರಾಯನಸ್ವಾಮಿ, ಎಚ್.ವಿ.ಗೋವಿಂದಸ್ವಾಮಿ, ಅರೂರು ವೆಂಕಟರೆಡ್ಡಿ, ಮಂಜು, ದೇವರಾಜ್, ಬೈರಪ್ಪ, ಯರ್ರಪ್ಪ ಉಪಸ್ಥಿತರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.