ಯಲಹಂಕ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ವಿದ್ಯಾನಗರ ಕ್ರಾಸ್ ಬಳಿ ರಸ್ತೆಗೆ ಮಧ್ಯದಲ್ಲಿದ್ದ ಕರಿಮಾ ರಿಯಮ್ಮ ದೇವಸ್ಥಾನ ಹಾಗೂ ವೆಂಕಟಾಲ ಸಮೀಪ ರಸ್ತೆಗೆ ಹೊಂದಿಕೊಂಡಿದ್ದ ಮಸೀದಿಯನ್ನು ಜಿಲ್ಲಾಧಿಕಾರಿ ಅವರ ಆದೇಶದ ಮೇರೆಗೆ ಸೋಮವಾರ ತೆರವು ಗೊಳಿಸಲಾಯಿತು.

ಬೆಂಗಳೂರು ಉತ್ತರ ಉಪವಿಭಾಗಾಧಿಕಾರಿಗಳು ಹಾಗೂ ತಹ ಶೀಲ್ದಾರ್ ನೇತೃತ್ವದ ತಂಡ ಪೊಲೀಸ್ ಭದ್ರತೆಯೊಂದಿಗೆ ಕಾರ್ಯಾಚರಣೆ ನಡೆಸಿ, ಕರಿಮಾರಿ ಯಮ್ಮ ದೇವಸ್ಥಾನವನ್ನು ತೆರವು ಗೊಳಿಸಲು ಮುಂದಾದರು. ಈ ಸಂದರ್ಭ ಅಧಿಕ ಸಂಖ್ಯೆಯಲ್ಲಿ ಜಮಾಯಿಸಿದ್ದ ಸ್ಥಳೀಯರು ಕಾರ್ಯಾಚರಣೆಗೆ ತಡೆಯೊಡ್ಡಿ, ಜನರ ಧಾರ್ಮಿಕ ಭಾವನೆಗೆ ಧಕ್ಕೆ ಬರುವುದರಿಂದ ಯಾವುದೇ ಕಾರಣಕ್ಕೂ ದೇವಸ್ಥಾನವನ್ನು ತೆರವು ಗೊಳಿಸಬಾರದು ಎಂದು ಪಟ್ಟು ಹಿಡಿದರು.

ಈ ಸಂದರ್ಭದಲ್ಲಿ ಸ್ಥಳೀಯರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದು, ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ನಂತರ ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿ, ತೆರವು ಕಾರ್ಯಾಚರಣೆಗೆ ಅನುವು ಮಾಡಿಕೊಟ್ಟರು.

‘ದೇವಾಲಯವನ್ನು ತೆರವು ಗೊಳಿಸುವಂತೆ ಈಗಾಗಲೆ ಸಂಬಂಧಪಟ್ಟವರಿಗೆ ಐದಾರು ಬಾರಿ ನೋಟಿಸ್ ಜಾರಿಗೊಳಿಸಿ, ಕಾಲಾ ವಕಾಶ ನೀಡಲಾಗಿತ್ತು. ಆದರೂ ತೆರವುಗೊಳಿಸಿಲ್ಲ. ರಾಷ್ಟ್ರೀ ಯ ಹೆದ್ದಾರಿಯ ವಿಸ್ತರಣೆ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಜಿಲ್ಲಾಧಿ ಕಾರಿಗಳ ಆದೇಶದ ಮೇರೆಗೆ ತೆರವುಗೊಳಿಸಲಾಗಿದೆ’ ಎಂದು ಬೆಂಗಳೂರು ಉತ್ತರ (ಹೆಚ್ಚುವರಿ) ತಹಶೀಲ್ದಾರ್ ಬಾಳಪ್ಪ ಹಂದಿಗುಂದ ತಿಳಿಸಿದರು.

ಇದೇ ರೀತಿ ರಸ್ತೆಗೆ ಹೊಂದಿಕೊಂಡಿರುವ ಯಲಹಂಕದ ಬಾಲಾಜಿ ದೇವಸ್ಥಾನ ಹಾಗೂ ಬ್ಯಾಟರಾಯನಪುರದ ಕೋದಂಡರಾಮಸ್ವಾಮಿ ದೇವಾಲಯವನ್ನು ಶೀಘ್ರದಲ್ಲೆ ತೆರವುಗೊಳಿಸಲಾಗುವುದು ಎಂದು ಅವರು ಹೇಳಿದರು. ಬೆಂಗಳೂರು ಉತ್ತರ ಉಪವಿಭಾಗಾಧಿಕಾರಿ ಮಹೇಶ್ಬಾಬು, ಈಶಾನ್ಯ ವಿಭಾಗದ ಡಿಸಿಪಿ ಟಿ.ಆರ್.ಸುರೇಶ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.