ಸೋಮವಾರ, ಮೇ 17, 2021
21 °C

ರಸ್ತೆ ಮಧ್ಯೆ ಸಿಕ್ಕಿಹಾಕಿಕೊಂಡ ಸಿ.ಎಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿಮ್ಲಾ (ಪಿಟಿಐ): ಧಾರಾಕಾರ ಮಳೆ ಹಾಗೂ ಹಿಮದ ಕಾರಣದಿಂದಾಗಿ ಹಿಮಾಚಲ ಪ್ರದೇಶದಲ್ಲಿ ಹತ್ತು ಜನರು ಮೃತಪಟ್ಟಿದ್ದಾರೆ.ಮಂಡಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಪ್ರಚಾರಕ್ಕಾಗಿ ತೆರಳಿದ್ದ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರು ಭೂ ಕುಸಿತದಿಂದಾಗಿ ಸಾಂಗ್ಲಾ ಕಣಿವೆಯ ರಸ್ತೆಯ ಮಧ್ಯೆ ಸಿಲುಕಿಕೊಂಡಿದ್ದಾರೆ.ಹೆಲಿಕಾಪ್ಟರ್ ಮೂಲಕ ಸಿಂಗ್ ಅವರನ್ನು ರಕ್ಷಿಸಲು ಸರ್ಕಾರ ಚುನಾವಣಾ ಆಯೋಗದ ಅನುಮತಿ ಕೇಳಿದೆ. ಮನವಿಗೆ ಸ್ಪಂದಿಸಿರುವ ಆಯೋಗ ರಕ್ಷಣಾ ಕಾರ್ಯಾಚರಣೆಗೆ ಅನುಮತಿಯನ್ನೂ ನೀಡಿದೆ. ಆದರೆ, ಪ್ರತಿಕೂಲ ಹವಾಮಾನವು ಸಿಂಗ್ ಅವರನ್ನು ರಕ್ಷಿಸುವ ಕಾರ್ಯಕ್ಕೆ ತಡೆಯೊಡ್ಡಿದೆ ಎಂದು ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಎಸ್.ರಾಯ್ ಹೇಳಿದ್ದಾರೆ.ರಾಜ್ಯದ ಬುಡಕಟ್ಟು ಜಿಲ್ಲೆಯಾದ ಕಿನ್ನೂರಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಮಳೆ ಹಾಗೂ ಭೂ ಕುಸಿತದಿಂದಾಗಿ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ರಾಜ್ಯದ ವಿವಿಧ ಕಡೆಗಳಲ್ಲಿ ವಿದೇಶಿಯರೂ ಸೇರಿದಂತೆ 1700ಕ್ಕೂ ಹೆಚ್ಚು ಜನರು ಸಿಲುಕಿಕೊಂಡಿದ್ದಾರೆ.ಸಾಂಗ್ಲಾ ಕಣಿವೆಯೊಂದರಲ್ಲೇ 800ಕ್ಕೂ ಹೆಚ್ಚು ಪ್ರವಾಸಿಗರು ರಸ್ತೆ ಮಧ್ಯೆ ಸಿಲುಕಿದ್ದಾರೆ. ಮಳೆಯಿಂದಾಗಿ ರಕ್ಷಣಾ ಕಾರ್ಯಕ್ಕೂ ಅಡಚಣೆಯಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.