ರಸ್ತೆ ಮೇಲೆ ಹರಿಯುವ ಒಳಚರಂಡಿ ನೀರು

ಬಾಗೇಪಲ್ಲಿ: ಪಟ್ಟಣದ 15, 18ನೇ ವಾರ್ಡ್ಗಳ ಸಂಪರ್ಕ ರಸ್ತೆಯಲ್ಲಿ ಒಳಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ದುರ್ವಾಸನೆಯಿಂದ ಅಕ್ಕಪಕ್ಕದ ಜನರು ಕಿರಿಕಿರಿ ಅನುಭವಿಸುತ್ತಿದ್ದಾರೆ.
ಒಳಚರಂಡಿ ಕಾಮಗಾರಿ ಕಾರಣ ಪಟ್ಟಣದ ಬಹುತೇಕ ಎಲ್ಲ ರಸ್ತೆಗಳೂ ಹದಗೆಟ್ಟಿವೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಜನರ ಕಷ್ಟ ಪರಿಹರಿಸಲು ಯತ್ನಿಸುತ್ತಿಲ್ಲ ಎಂದು ಪಟ್ಟಣವಾಸಿ ಮೊಹಮದ್ ಎಸ್.ನೂರುಲ್ಲಾ ‘ಪ್ರಜಾವಾಣಿ’ಗೆ ತಿಳಿಸಿದರು.
ಸಂಪರ್ಕ ರಸ್ತೆಯಲ್ಲಿ ಪ್ರತಿದಿನ ನೂರಾರು ಮಂದಿ ಸಂಚರಿಸುತ್ತಾರೆ. ಮಕ್ಕಾ ಮಸೀದಿ ತಲುಪಲು ಮುಸ್ಲಿಮರು ಬಳಸುವ ಏಕೈಕ ರಸ್ತೆ ಇದೆ. ರಸ್ತೆಯಲ್ಲಿ ರಾತ್ರಿ ಹೊತ್ತು ಬೀದಿ ದೀಪಗಳು ಉರಿಯುತ್ತಿಲ್ಲ. ಇದರಿಂದ ಸ್ಥಳೀಯರಿಗೆ ಓಡಾಡಲು ಕಷ್ಟವಾಗುತ್ತಿದೆ ಎಂದು ಹೇಳಿದರು.
ರಸ್ತೆಯಲ್ಲಿ ಗುಂಡಿಗಳು ಬಿದ್ದು ಹಲವು ತಿಂಗಳು ಕಳೆದರೂ ದುರಸ್ತಿ ಕಾಮಗಾರಿ ಆರಂಭವಾಗಿಲ್ಲ. ಕಿರಿದಾದ ಈ ರಸ್ತೆಯಲ್ಲಿಯೇ ವಾಹನಗಳು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಸಂಚರಿಸಬೇಕಾದ ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿದೆ ಎಂದು ವಿಷಾದಿಸಿದರು.
ಒಳಚರಂಡಿ ಕಾಮಗಾರಿಯಿಂದಾಗಿ ರಸ್ತೆಗಳು ಹಾಳಾಗಿವೆ. ಪೈಪ್ಲೈನ್ ಸರಿಪಡಿಸಲು ಕೂಡಲೇ ಕ್ರಮ ಜರುಗಿಸಲಾಗುವುದು.
ವಿ.ಪಂಕಜಾರೆಡ್ಡಿ, ಪುರಸಭೆ ಮುಖ್ಯಾಧಿಕಾರಿ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.