ರಸ್ತೆ ವಿಸ್ತರಣೆ ಕಾಮಗಾರಿ ಸ್ಥಗಿತಕ್ಕೆ ಒತ್ತಾಯ

ಬುಧವಾರ, ಜೂಲೈ 24, 2019
27 °C

ರಸ್ತೆ ವಿಸ್ತರಣೆ ಕಾಮಗಾರಿ ಸ್ಥಗಿತಕ್ಕೆ ಒತ್ತಾಯ

Published:
Updated:

ರಾಯಚೂರು: ತಾಲ್ಲೂಕಿನ ಮಮದಾಪುರ ಗ್ರಾಮದಲ್ಲಿ ಜಿಪಂ ವತಿಯಿಂದ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ ಕೈಗೊಂಡಿರುವ ರಸ್ತೆ ವಿಸ್ತರಣೆ ಕಾಮಗಾರಿ  ಸ್ಥಗಿತಗೊಳಿಸಬೇಕು ಎಂದು ರೈತ ಕೃಷಿ ಕಾರ್ಮಿಕರ ಸಂಘಟನೆ(ಆರ್‌ಕೆಎಸ್) ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಮಮದಾಪುರ ಗ್ರಾಮಸ್ಥರು ಗುರುವಾರ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.ಈ ಬಗ್ಗೆ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಜಿಲ್ಲಾ ಪಂಚಾಯಿತಿಯ `ನಮ್ಮ ಗ್ರಾಮ ನಮ್ಮ ರಸ್ತೆ' ಯೋಜನೆಯಡಿ ಶ್ರೀನಿವಾಸ ಕ್ಯಾಂಪ್‌ನಿಂದ ಮಮದಾಪುರ ಗ್ರಾಮದ ಮಾರ್ಗವಾಗಿ ದಿನ್ನಿ ಗ್ರಾಮದವರೆಗಿನ ರಸ್ತೆ ಕಾಮಗಾರಿ ಕೈಗೊಂಡಿದೆ ಎಂದು ತಿಳಿಸಿದರು.ಸದ್ಯ ಈ ರಸ್ತೆ 12 ಅಡಿ ಬಂಡಿ ರಸ್ತೆ ಇದ್ದು, ಈ ರಸ್ತೆಯನ್ನು ಹೆಚ್ಚಿಗೆ ವಿಸ್ತರಣೆ ಮಾಡುವುದರಿಂದ ಮಮದಾಪುರ ಗ್ರಾಮದ ದಿನ್ನಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದ ಎರಡು ಬದಿಯಲ್ಲಿಯೂ ಸಣ್ಣ ರೈತರು ಹಾಗೂ ಕೃಷಿ    ಕಾರ್ಮಿಕರಿಗೆ ಸೇರಿದ ಮನೆಗಳ ಕಳೆದುಕೊಂಡು ಬೀದಿಪಾಲಾಗಬೇಕಾಗುತ್ತದೆ ಎಂದು ಸಮಸ್ಯೆ ವಿವರಿಸಿದರು.ರಸ್ತೆ ವಿಸ್ತರಣೆಗಾಗಿ ಗ್ರಾಮಸ್ಥರ ಮನೆ ತೆರವುಗೊಳಿಸಿದರೆ, ಈಗಿರುವ ರೀತಿಯಲ್ಲಿ ಪುನರ್ವಸತಿ ಕಲ್ಪಿಸಬೇಕು, ರಸ್ತೆಯನ್ನು ಜನ ವಸತಿ ಇಲ್ಲದ ಪ್ರದೇಶದಲ್ಲಿ ನಿರ್ಮಾಣ ಮಾಡಬೇಕು, ಗ್ರಾಮಸ್ಥರ ಮನೆಗಳನ್ನು ತೆರವುಗೊಳಿಸದೇ ರಸ್ತೆ ನಿರ್ಮಾಣ ಮಾಡಬೇಕು ಎಂದು ಆರ್‌ಕೆಎಸ್ ಸಂಘಟನೆಯ ಜಿಲ್ಲಾ ಸಂಚಾಲಕ ರಾಮಣ್ಣ ಎಂದು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಲ್ಲಿಸಿದ ಪತ್ರದಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry