ಭಾನುವಾರ, ಜನವರಿ 19, 2020
25 °C

ರಸ್ತೆ ಸುರಕ್ಷತಾ ಸಪ್ತಾಹ: ಜಾಥಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ಸಂಚಾರ ನಿಯಮಗಳು ಮತ್ತು ರಸ್ತೆ ಸುರಕ್ಷತಾ ಕ್ರಮ ಕುರಿತು ಜಾಗೃತಿಮೂಡಿಸುವ ನಿಟ್ಟಿನಲ್ಲಿ ಶುಕ್ರವಾರ ಮಂಡ್ಯದಲ್ಲಿ ಜಾಥಾ, ಜಾಗೃತಿ ಓಟ ನಡೆಯಿತು.ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ನಡೆದ ಈ ಜಾಥಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಬಳಿಯಿಂದ ಆರಂಭವಾಗಿದ್ದು, ಬನ್ನೂರು ರಸ್ತೆಯ ಕವಾಯತು ಮೈದಾನದ ಬಳಿ ಅಂತ್ಯವಾಯಿತು.ಸಂಚಾರ ನಿಯಮಗಳ ಕುರಿತುಜಾಗೃತಿ ಮೂಡಿಸುವ ಭಿತ್ತಿಪತ್ರ,ಗಳನ್ನು ಹಿಡಿದಿದ್ದ ವಿದ್ಯಾರ್ಥಿನಿಯರು ನಾಗರಿಕರ ಗಮನಸೆಳೆದರು. ಸಾರ್ವಜನಿಕರಲ್ಲಿ ಸಂಚಾರ ನಿಯಮಗಳ ಬಗೆಗೆ ಅರಿವು, ಜಾಗೃತಿ ಮೂಡಿಸುವ ಕ್ರಮವಾಗಿ ಈ ಜಾಥಾ ಸಂಘಟಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೌಶಲೇಂದ್ರ ಕುಮಾರ್ ಈ ಸಂದರ್ಭ ತಿಳಿಸಿದರು.ಜಿಲ್ಲಾಧಿಕಾರಿ ಡಾ. ಜಾಫರ್, ವಿವಿಧ ಅಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

ಪ್ರತಿಕ್ರಿಯಿಸಿ (+)