ರಾಗಿಂಗ್: ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

7

ರಾಗಿಂಗ್: ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Published:
Updated:

ಮಥುರಾ (ಪಿಟಿಐ): ಕಿರಿಯ ವಿದ್ಯಾರ್ಥಿಗಳ ಮೇಲೆ ಹಿರಿಯ ವಿದ್ಯಾರ್ಥಿಗಳು ರ‌್ಯಾಗಿಂಗ್ ನಡೆಸಿದ ಪರಿಣಾಮ ನಾಲ್ವರು ತೀವ್ರವಾಗಿ ಗಾಯಗೊಂಡ ಘಟನೆ ಮಥುರಾದ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ.ಇಲ್ಲಿನ ಬಿಎಸ್‌ಎ ಎಂಜಿನಿಯರಿಂಗ್ ಕಾಲೇಜಿನಿಲ್ಲಿ ಗುರುವಾರ ರಾತ್ರಿ ಕೆಲವು ಹಿರಿಯ ವಿದ್ಯಾರ್ಥಿಗಳು ಅದೇ ಕಾಲೇಜಿನ ಕಿರಿಯ ವಿದ್ಯಾರ್ಥಿಗಳಿಗೆ ರಾಗಿಂಗ್ ಮಾಡಲು ಯತ್ನಿಸಿದ್ದಾರೆ. ಇದರಿಂದ ಕಿರಿಯ-ಹಿರಿಯ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದಿದೆ. ನಂತರ ಅದು ಹಿಂಸಾಚಾರ ತಿರುಗಿದೆ. ಪರಿಣಾಮವಾಗಿ ನಾಲ್ವರು ಕಿರಿಯ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ ಕಾಲೇಜಿನ ವಾರ್ಡನ್ ಪರಿಸ್ಥಿತಿ ನಿಯಂತ್ರಿಸಿದ್ದಾರೆ ಎಂದು ರಿಜಿಸ್ಟ್ರಾರ್ ಭಗವಾನ್‌ದಾಸ್ ತಿಳಿಸಿದ್ದಾರೆ. ಘಟನೆಯ ಸಂಬಂಧ ಎಂಟು ಮಂದಿ ಹಿರಿಯ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಿಂದ ವಜಾಗೊಳಿಸಲಾಗಿದೆ. ಕಾಲೇಜು ಶಿಸ್ತು ಸಮಿತಿ ಈ ವಿದ್ಯಾರ್ಥಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಲಿದೆ ಎಂದು ಭಗವಾನ್ ದಾಸ್ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry