ರಾಘವೇಂದ್ರಸ್ವಾಮಿಗಳ ಆರಾಧನಾ ಮಹೋತ್ಸವ

ಬುಧವಾರ, ಮೇ 22, 2019
24 °C

ರಾಘವೇಂದ್ರಸ್ವಾಮಿಗಳ ಆರಾಧನಾ ಮಹೋತ್ಸವ

Published:
Updated:

ಬೆಂಗಳೂರು: ಬನ್ನೇರುಘಟ್ಟ ಬಳಿಯ ನಿಸರ್ಗ ಲೇಔಟ್‌ನ ಆಂಜನೇಯ ಹಾಗೂ ರಾಘವೇಂದ್ರಸ್ವಾಮಿಗಳ ದೇವಾಲಯದಲ್ಲಿ ನಿರ್ಮಾಣ್ ದೇವಾಲಯಗಳ ವಿಶ್ವಸ್ಥ ಮಂಡಳಿ ವತಿಯಿಂದ ಇತ್ತೀಚೆಗೆ ರಾಘವೇಂದ್ರಸ್ವಾಮಿಗಳ 341ನೇ ಆರಾಧನಾ ಮಹೋತ್ಸವ ನಡೆಯಿತು.ಬಡಾವಣೆಯ ಪುರಂದರ ಮಂಟಪ ಹಾಗೂ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಹಾಗೂ ಭಜನೆ ಏರ್ಪಡಿಸಲಾಗಿತ್ತು. ಆರಾಧನೆಯ ಅಂಗವಾಗಿ `ಅಷ್ಟಾಕ್ಷರ ಮಂತ್ರ ಹೋಮ~ ಹಾಗೂ ರಾಘವೇಂದ್ರಸ್ವಾಮಿಗಳ ಬೃಂದಾವನಕ್ಕೆ ವಿಶೇಷ ಅಲಂಕಾರ ಹಾಗೂ ವಿಶೇಷ ಪೂಜೆ ನಡೆಸಲಾಯಿತು.3 ದಿನಗಳ ಕಾಲ ನಡೆದ ಆರಾಧನೆಯಲ್ಲಿ ವಾಣಿ ಸತೀಶ್, ಎಂ.ಎ.ವೀಣಾ ಮತ್ತು ನಾಗರಾಜ ಹವಾಲ್ದಾರ್ ಅವರಿಂದ ಭಕ್ತಿಗೀತೆಗಳ ಗಾಯನ ನಡೆಯಿತು. ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ನಡೆದವು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry