ಶುಕ್ರವಾರ, ಮೇ 7, 2021
19 °C

ರಾಘವೇಶ್ವರ ಶ್ರೀ ಸುರಕ್ಷಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿದ್ದಾಪುರ: ಮಾನಸ ಸರೋವರ ಯಾತ್ರೆಗೆ ತೆರಳಿರುವ ರಾಮಚಂದ್ರಾಪುರ ಮಠದ  ರಾಘವೇಶ್ವರ ಭಾರತಿ ಸ್ವಾಮೀಜಿ ಉತ್ತರಾಖಂಡದ ಹೃಷಿಕೇಶದ  ಚಿದಾನಂದ ಸರಸ್ವತಿ ಸ್ವಾಮೀಜಿ ಅವರ ಆಶ್ರಮದಲ್ಲಿ ಕ್ಷೇಮದಿಂದ ವಾಸ್ತವ್ಯ ಮಾಡಿದ್ದಾರೆ ಎಂದು ಹವ್ಯಕ ಮಹಾಮಂಡಳದ ಅಧ್ಯಕ್ಷ ಆರ್.ಎಸ್.ಹೆಗಡೆ ಹರಗಿ ತಿಳಿಸಿದ್ದಾರೆ.ಶ್ರೀಗಳೊಂದಿಗೆ ಯಾತ್ರೆಗೆ ತೆರಳಿರುವ ಅವರು, ಅಲ್ಲಿ ಸುರಿದ ಭಾರಿ ಮಳೆಯಿಂದ ಮಠದ ಶಿಷ್ಯರು ಆತಂಕಕ್ಕೆ ಒಳಗಾಗಿರುವ ಹಿನ್ನೆಲೆಯಲ್ಲಿ ಈ  ಹೇಳಿಕೆ ನೀಡಿದ್ದಾರೆ.ಬುಧವಾರ ಅಲ್ಲಿ ನದಿಯ ಪ್ರವಾಹ ಇಳಿಮುಖವಾಗಿದ್ದು ರಾಘವೇಶ್ವರ ಭಾರತಿ ಸ್ವಾಮೀಜಿ ಇದೇ 23ರಂದು ನವದೆಹಲಿ ಮೂಲಕ ಮಾನಸ ಸರೋವರ ಪರಿಕ್ರಮ ಮುಂದುವರಿಸುವರು. ಆದ್ದರಿಂದ ಯಾರೂ ಆತಂಕಗೊಳ್ಳಬೇಕಾಗಿಲ್ಲ ಎಂದು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.