ಭಾನುವಾರ, ಏಪ್ರಿಲ್ 11, 2021
25 °C

ರಾಜಕೀಯದಲ್ಲಿ ಧಾರ್ಮಿಕ ಮುಖಂಡರ ಹಸ್ತಕ್ಷೇಪ ಬೇಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: `ರಾಜಕೀಯ ಕೇತ್ರದಲ್ಲಿ ನಡೆಯುವ ಯಾವುದೇ ಬೆಳವಣಿಗೆಯಲ್ಲಿ ಧಾರ್ಮಿಕ ಮುಖಂಡರು ಹಸ್ತಕ್ಷೇಪ ಮಾಡುವುದು ಸರಿಯಲ್ಲ~ ಎಂದು ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ಅಭಿಪ್ರಾಯಪಟ್ಟರು.ನಗರದ ದಕ್ಷಿಣ ಕನ್ನಡ ದ್ರಾವಿಡ ಬ್ರಾಹ್ಮಣ ಸಮಾಜದ ಶಿಕ್ಷಣ ಸಂಸ್ಥೆಗೆ ಬುಧವಾರ ಭೂಮಿಪೂಜೆ ನೆರವೇರಿಸಿದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.`ರಾಜಕೀಯ ಕ್ಷೇತ್ರದಲ್ಲಿ ಇಂದು ಅನೇಕ ಬೆಳವಣಿಗೆಗಳು ನಡೆಯುತ್ತಿವೆ. ಪಕ್ಷಗಳು ಹಾಗೂ ಒಂದೇ ಪಕ್ಷದ ಮುಖಂಡರು ಪರಸ್ಪರ ಕಚ್ಚಾಡುವುದನ್ನು ಬಿಟ್ಟು ಒಗ್ಗಟ್ಟಿನಿಂದ ಕೆಲಸ ಮಾಡಿ ರಾಜ್ಯದ ಹಿತವನ್ನು ಕಾಪಾಡಲು ಮುಂದಾಗಬೇಕು~ ಎಂದು ಅವರು ಸಲಹೆ ನೀಡಿದರು.ಸದಾನಂದಗೌಡ ಅವರ ರಾಜೀನಾಮೆಗೆ ಸಂಬಂಧಿಸಿ ಪ್ರತಿಕ್ರಿಯಿಸಲು ನಿರಾಕರಿಸಿದ ಸ್ವಾಮೀಜಿ, ತಾವು ರಾಜಕೀಯ ವಿಷಯಕ್ಕೆ ಸಂಬಂಧಪಟ್ಟು ತಟಸ್ಥರಾಗಿದ್ದು ಸಾಮಾಜಿಕ, ಪರಿಸರ ರಕ್ಷಣೆ ಮುಂತಾದ ವಿಷಯಗಳಲ್ಲಿ ತೊಡಗಿಸಿಕೊಂಡಿರುವುದಾಗಿಯೂ ಭ್ರಷ್ಟಾಚಾರ ವಿರೋಧಿ ಹೋರಾಟಗಳಲ್ಲಿ ಭಾಗವಹಿಸುವುದಾಗಿಯೂ ತಿಳಿಸಿದರು.ವಿಪ್ ಜಾರಿ ಬೇಡ: ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿ ಸಂಸದರು, ಶಾಸಕರಿಗೆ ಪಕ್ಷಗಳು ವಿಪ್ ಜಾರಿ ಮಾಡಬಾರದು ಎಂದು ಚುನಾವಣಾ ಆಯೋಗ ಹೇಳಿರುವುದಕ್ಕೆ ಸಹಮತ ವ್ಯಕ್ತಪಡಿಸಿದ ಸ್ವಾಮೀಜಿ, ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಸದಸ್ಯರನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ವಿಪ್ ಜಾರಿ ಮಾಡಬೇಕು, ಆದರೆ ಗುಪ್ತ ಮತದಾನ ಇರಬಾರದು. ಹೀಗೆ ಮಾಡುವುದರಿಂದ ಭ್ರಷ್ಟಾಚಾರವನ್ನು ತಡೆಯಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.ಕೈ ಬರಹ ಸುಧಾರಣೆ ತರಬೇತಿ


ಹುಬ್ಬಳ್ಳಿ: ಎಚ್. ಮಲ್ಲಿಕ್ ಹ್ಯಾಂಡ್‌ರೈಟಿಂಗ್ ಇಂಪ್ರೂವ್‌ಮೆಂಟ್ ಸ್ಕಿಲ್ಸ್ ಸಂಸ್ಥೆ ಇದೇ 12ರಿಂದ 26ರವರೆಗೆ ಪ್ರಾಥಮಿಕ, ಮಾಧ್ಯಮಿಕ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗಾಗಿ ಕೈಬರಹ ಸುಧಾರಣಾ ತರಬೇತಿ ಶಿಬಿರ ಆಯೋಜಿಸಿದೆ.ಮಾಹಿತಿಗೆ ದೂ; 0836-6450541, ಮೊ; 9964269197 ಸಂಖ್ಯೆಗಳಿಗೆ ಸಂಪರ್ಕಿಸಬಹುದು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.