ಬೆಂಗಳೂರು: ಥಣಿಸಂದ್ರ ಗ್ರಾಮದಲ್ಲಿನ ಭೂಮಿಯನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಆರೋಪಪಟ್ಟಿ ನ್ಯಾಯಾಲಯದಲ್ಲಿ ಪ್ರಶ್ನಿಸುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಆರೋಪಪಟ್ಟಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, `ನಾನಾಗಲೀ, ಚನ್ನಿಗಪ್ಪ ಅವರಾಗಲೀ ಕಾನೂನಿಗೆ ವಿರುದ್ಧವಾಗಿ ಯಾವುದೇ ಕೆಲಸ ಮಾಡಿಲ್ಲ. ವೈಯಕ್ತಿಕವಾಗಿ ಯಾವುದೇ ಲಾಭವನ್ನೂ ಮಾಡಿಕೊಂಡಿಲ್ಲ ~ ಎಂದರು.

` ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಸ್ವಾಧೀನದಲ್ಲಿದ್ದ ಸ್ವತ್ತನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟ ಪ್ರಕರಣಗಳಲ್ಲಿ ನೇರ ಲಾಭ ಪಡೆದ ಸಚಿವರಾದ ಆರ್.ಅಶೋಕ, ವಿ.ಸೋಮಣ್ಣ ಅವರನ್ನು ಇದೇ ಪೊಲೀಸರು ರಕ್ಷಿಸುವ ಪ್ರಯತ್ನ ಮಾಡಿದ್ದಾರೆ. ಆದರೆ, ರಾಜಕೀಯ ಒತ್ತಡಕ್ಕೆ ಮಣಿದು ನಮ್ಮ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದಾರೆ~ ಎಂದು ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.