ರಾಜಕೀಯ ಧ್ರುವೀಕರಣಕ್ಕೆ ಸಕಾಲ

6

ರಾಜಕೀಯ ಧ್ರುವೀಕರಣಕ್ಕೆ ಸಕಾಲ

Published:
Updated:

ಬೆಂಗಳೂರು: `ರಾಜ್ಯದಲ್ಲಿ ರಾಜಕೀಯ ಧ್ರುವೀಕರಣಕ್ಕೆ ಕಾಲ ಪಕ್ವವಾಗಿದ್ದು, ಜನತಾ ಪರಿವಾರವನ್ನು ಒಗ್ಗೂಡಿಸುವ ಪ್ರಾಮಾಣಿಕ ಪ್ರಯತ್ನ ನಡೆಯಬೇಕಿದೆ~ ಎಂದು ಜೆಡಿಎಸ್ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಪಿ.ಜಿ.ಆರ್. ಸಿಂಧ್ಯ ಹೇಳಿದರು.ಮಾನವಧರ್ಮ ಅಂತರರಾಷ್ಟ್ರೀಯ ಪ್ರತಿಷ್ಠಾನ ಕೇಂದ್ರವು ನಗರದ ನಯನ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಜೆ.ಎಚ್. ಪಟೇಲ್ ಅವರ ಜನ್ಮ ದಿನಾಚರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.ಜೆಡಿಯು ರಾಜ್ಯ ಘಟಕದ ಅಧ್ಯಕ್ಷ ಡಾ.ಎಂ.ಪಿ. ನಾಡಗೌಡ, `ಇಂದಿನ ರಾಜಕೀಯ ಪರಿಸ್ಥಿತಿ ಸೂಕ್ಷ್ಮವಾಗಿ ಗಮನಿಸುವವರು ಹಾಗೂ ಸಾಮಾನ್ಯ ಜನತೆ ಜೆ.ಎಚ್.ಪಟೇಲ್, ರಾಮಕೃಷ್ಣ ಹೆಗ್ಡೆ ಅಂತವರ ಸರ್ಕಾರ ಇರಬೇಕಿತ್ತು ಎಂದು ಸ್ಮರಿಸುವುದು  ಕಂಡಾಗ ಅವರ ಬಗ್ಗೆ ಹೆಮ್ಮೆ ಎನಿಸುತ್ತದೆ~ ಎಂದರು.ಸನ್ಮಾನ ಸ್ವೀಕರಿಸಿ ಮಾತನಾಡಿದ ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ,  `ಕಾಂಗ್ರೆಸ್ ಪಕ್ಷ ನೆಹರು ಪರಿವಾರವಾದರೆ, ಬಿಜೆಪಿ ಸಂಘ ಪರಿವಾರ. ಜೆಡಿಎಸ್ ಗೌಡರ ಪರಿವಾರ. ಈ ಪರಿವಾರಗಳನ್ನು ಮೀರಿದ ರಾಜಕೀಯ ಧ್ರುವೀಕರಣ ನಡೆಯಬೇಕಿದೆ~ ಎಂದರು.ಅರ್ಜುನ ಪ್ರಶಸ್ತಿ ಪುರಸ್ಕೃತೆ ತೇಜಸ್ವಿನಿ ಬಾಯಿ ಅವರನ್ನು ಸನ್ಮಾನಿಸಲಾಯಿತು. ಶಿಕ್ಷಣ ತಜ್ಞ ಪ್ರೊ.ಕೆ.ಈ. ರಾಧಾಕೃಷ್ಣ, ಕೇಂದ್ರದ ಅಧ್ಯಕ್ಷ ಕೆ.ಲಕ್ಷ್ಮಿನಾರಾಯಣ, ಪ್ರಧಾನ ಕಾರ್ಯದರ್ಶಿ ಪಿ.ವಿಜಯಕುಮಾರ್ ಇತರರು ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry