ಗುರುವಾರ , ಮೇ 28, 2020
27 °C

ರಾಜಭವನದಲ್ಲೇ ನಾಡೋಜ ಪ್ರದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಖ್ಯಾತ ಹಿನ್ನೆಲೆ ಗಾಯಕ ಪಿ.ಬಿ.ಶ್ರೀನಿವಾಸ್ ಅವರಿಗೆ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರು ಮಂಗಳವಾರ ಕನ್ನಡ ವಿಶ್ವವಿದ್ಯಾಲಯದ ನಾಡೋಜ ಪದವಿ ಪ್ರದಾನ ಮಾಡಿದರು.ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪದವಿ ಸ್ವೀಕರಿಸಿ ಮಾತನಾಡಿದ ಡಾ.ವೀರೇಂದ್ರ ಹೆಗ್ಗಡೆ, ‘ಧರ್ಮಸ್ಥಳದಲ್ಲಿ ಅನೇಕ ಸ್ಮಾರಕ ಹಾಗೂ ತಾಡಪತ್ರಿಗಳ ಸಂರಕ್ಷಣೆ ಮಾಡಲಾಗಿದ್ದರೂ, ಇನ್ನೂ ಹಲವಾರು ಸ್ಮಾರಕಗಳು ಸಂರಕ್ಷಣೆಯಿಲ್ಲದೇ ನಶಿಸುತ್ತಿವೆ’ ಎಂದು ವಿಷಾದಿಸಿದರು.ಧರ್ಮಸ್ಥಳದಲ್ಲಿ ಸ್ಥಾಪಿಸಲಾದ ಮಂಜೂಷಾ ವಸ್ತುಸಂಗ್ರಹಾಲಯ ಹಾಗೂ ಗ್ರಂಥ ಭಂಡಾರವನ್ನು ಹಂಪಿ ಕನ್ನಡ ವಿಶ್ವವಿದ್ಯಾಲಯವು ಸಂಶೋಧನೆಗೆ ಬಳಸಿಕೊಳ್ಳಬಹುದು ಎಂದು ನುಡಿದರು.ಧರ್ಮಸ್ಥಳಕ್ಕೆ ಭೇಟಿ ನೀಡಬೇಕು ಎಂದು ರಾಜ್ಯಪಾಲರನ್ನು ಅವರು ಇದೇ ಸಂದರ್ಭದಲ್ಲಿ ಆಹ್ವಾನಿಸಿದರು.ಗಾಯಕ ಪಿ.ಬಿ.ಶ್ರೀನಿವಾಸ್, ಇದೊಂದು ಮರೆಯಲಾಗದ ಹೊನ್ನಿನ ದಿನ ಎಂದು ಬಣ್ಣಿಸಿ, ಸ್ವರಚನೆಯ ಕವಿತೆಯ ಸಾಲುಗಳನ್ನು ಹಾಡಿದರು.ಸಾಹಿತಿ ದಂಪತಿ ಡಾ.ಹಂಪ ನಾಗರಾಜಯ್ಯ ಹಾಗೂ ಡಾ.ಕಮಲಾ ಹಂಪನಾ, ಹಿರಿಯ ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ, ಹಂಪಿ ಕನ್ನಡ ವಿ.ವಿ. ಕುಲಪತಿ ಡಾ.ಎ.ಮುರಿಗೆಪ್ಪ ಮತ್ತಿತರರು ಉಪಸ್ಥಿತರಿದ್ದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.