ಜೈಪುರ (ಪಿಟಿಐ): ಉತ್ತರಾಖಂಡದಲ್ಲಿ ಧಾರಾಕಾರ ಮಳೆ ಹಾಗೂ ಪ್ರವಾಹದಿಂದ ಅನೇಕರು ಸಾವನ್ನಪ್ಪಿದ್ದು, ಹೆದ್ದಾರಿಗಳು ಮುಚ್ಚಿಹೋಗಿರುವ ಹಿನ್ನೆಲೆಯಲ್ಲಿ ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮಂಗಳವಾರ ರಾಜ್ಯಕ್ಕೆ ರೂ 2ಕೋಟಿ ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದ್ದಾರೆ.

ಉತ್ತರಾಖಂಡ ಮುಖ್ಯಮಂತ್ರಿ ವಿಜಯ್ ಬಹುಗುಣ ಅವರೊಂದಿಗೆ ಮಾತನಾಡಿದ ಗೆಹ್ಲೋಟ್ ಅವರು ಆ ರಾಜ್ಯದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಜನರ ಬಗ್ಗೆ ಅನುಕಂಪ ವ್ಯಕ್ತಪಡಿಸಿದ್ದಾರೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ. ರಾಜ್ಯದಲ್ಲಿ ಮಳೆ ಕ್ಷೀಣಿಸಿದೆ. ಮಂಗಳವಾರ ಮಧ್ಯಾಹ್ನ ಮೋಡ ಸ್ಪಷ್ಟವಾಗಿದೆ.

ಆಹಾರದ ಪೊಟ್ಟಣಗಳನ್ನು ಹೆಲಿಕಾಪ್ಟರ್ ಮೂಲಕ ನೀಡಲಾಗುತ್ತಿದ್ದು, ಸೇನೆಯ ಸಹಾಯ ತೆಗೆದುಕೊಳ್ಳಲಾಗಿದೆ ಎಂದು ಗೆಹ್ಲೋಟ್ ಅವರಿಗೆ ಬಹುಗುಣ ಅವರು ಮಾಹಿತಿ ನೀಡಿದ್ದಾರೆ.ರಾಜಸ್ತಾನದ ಮುಖ್ಯ ಕಾರ್ಯದರ್ಶಿ ಸಿ.ಕೆ.ಮ್ಯಾಥ್ಯೂ ಕೂಡ ಉತ್ತರಾಖಂಡಕ್ಕೆ ಅಗತ್ಯವಾದ ಸಹಾಯ ನೀಡುವುದಾಗಿ ಹೇಳಿದ್ದಾರೆ ಎಂದು ಪ್ರಕಟಣೆ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.