ಸೋಮವಾರ, ಏಪ್ರಿಲ್ 12, 2021
23 °C

ರಾಜಸ್ತಾನ: ಮಳೆಗೆ 12 ಬಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜೈಪುರ (ಪಿಟಿಐ): ರಾಜಸ್ತಾನದಲ್ಲಿ ಬುಧವಾರದಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಒಟ್ಟು 12 ಮಂದಿ ಸಾವನ್ನಪ್ಪಿದ್ದು ಹಲವು ಮಂದಿಯನ್ನು ರಕ್ಷಿಸಲಾಗಿದೆ.ಸತತವಾಗಿ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು ಮಳೆಯಿಂದಾಗಿ ರಾಜಧಾನಿಯಲ್ಲಿ ಹತ್ತು ಮಂದಿ ಹಾಗೂ ದೌಸಾ ಜಿಲ್ಲೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಮುಖ್ಯಮಂತ್ರಿ ಅಶೋಕ್ ಸಿಂಗ್ ಗೆಹ್ಲೋಟ್ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಪರಿಸ್ಥಿತಿಯ ಮಾಹಿತಿ ಪಡೆದರು ಎಂದರು.ರಾಜ್ಯದಲ್ಲಿ ಮಳೆ ಸುರಿಯುತ್ತಿದ್ದರೂ ಪ್ರವಾಹ ಪರಿಸ್ಥಿತಿ ತಲೆದೋರಿಲ್ಲ. ಹತ್ತು ಕಡೆಗಳಲ್ಲಿ 200ಮಿ.ಮೀ.ಗಿಂತಲೂ ಹೆಚ್ಚಿನ ಮಳೆಯಾದ ವರದಿ ದೊರೆತಿದೆ~ ಎಂದು ಮುಖ್ಯಮಂತ್ರಿ ತಿಳಿಸಿದರು ಎಂದರು.

ಜಮ್ಮುವಿನಲ್ಲೂ ಮಳೆ: ಕಳೆದ ಎರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಉಂಟಾದ ಭೂಕುಸಿತದಿಂದಾಗಿ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಪರ್ಕ ಕಡಿದುಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ಜಮ್ಮುವಿನಿಂದ ಸುಮಾರು 160 ಕಿ.ಮೀ. ದೂರದಲ್ಲಿನ ರಂಬಾನ್ ಪ್ರಾಂತ್ಯದಲ್ಲಿ ಸುಮಾರು 500 ವಾಹನಗಳು ಸಾಲಾಗಿ ನಿಂತಿದ್ದವು ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ.`ನಿರಂತರವಾಗಿ ನಡೆಯುತ್ತಿರುವ ಭೂಕುಸಿತ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿವೆ ಎಂದು ಗಡಿ ರಸ್ತೆಗಳ ಸಂಘಟನೆಯ ಅಧಿಕಾರಿ ತಿಳಿಸಿದ್ದಾರೆ. ಶ್ರೀನಗರದ್ಲ್ಲಲಿ ನಿಯಂತ್ರಣ ರೇಖೆಯ ಬಳಿ ಸುರಿದ ಬಿರುಗಾಳಿಯಿಂದ ಕೂಡಿದ ಭಾರೀ  ಠಾಣೆ, 8 ಮನೆಗಳು ಕೊಚ್ಚಿಕೊಂಡು ಹೋಗಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.