ಶನಿವಾರ, ಮೇ 15, 2021
25 °C

ರಾಜಸ್ಥಾನ್ ರಾಯಲ್ಸ್‌ನ ರಾಜ್‌ ಕುಂದ್ರಾ ಅಮಾನತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಯು ಸೊಮವಾರ ರಾಜಸ್ಥಾನ್ ರಾಯಲ್ಸ್‌ನ ಸಹ ಮಾಲೀಕ ರಾಜ್‌ಕುಂದ್ರಾ ಅವರನ್ನು ಅಮಾನತುಗೊಳಿಸಿದೆ.ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ರಾಜ್‌ಕುಂದ್ರ ಅವರನ್ನು ರಾಜಸ್ಥಾನ್ ರಾಯಲ್ಸ್ ಪ್ರಾಂಚೈಸಿಯಿಂದ ಅಮಾನತು ಮಾಡಲಾಗಿದೆ ಎಂದು ಬಿಸಿಸಿಐನ ಉಪಾಧ್ಯಕ್ಷ ಚಿತ್ರಕಾ ಮಿಶ್ರಾ ತಿಳಿಸಿದ್ದಾರೆ.ರಾಜ್‌ಕುಂದ್ರಾ ಅವರನ್ನು ದೆಹಲಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದ ಸಂದರ್ಭದಲ್ಲಿ  ಬೆಟ್ಟಿಂಗ್ ನಡೆಸಿರುವುದಾಗಿ ಅವರು ಒಪ್ಪಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಅಮಾನತುಗೊಳಿಸಿರುವುದಾಗಿ ಬಿಸಿಸಿಐ ತಿಳಿಸಿದೆ.ಈ ಮೂಲಕ ಬಿಬಿಸಿಐ ಬೆಟ್ಟಿಂಗ್ ನಡೆಸುವವರಿಗೂ ಬಿಸಿ ಮುಟ್ಟಿಸಿದಂತಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.