ಬುಧವಾರ, ಏಪ್ರಿಲ್ 21, 2021
23 °C

ರಾಜಾಜಿನಗರದಲ್ಲಿ ಶಾಲೆ ಉದ್ಘಾಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಬಿಎಂಪಿ ಹಾಗೂ ಭಾರತೀಯ ವಿದ್ಯಾಭವನದ ಸಹಯೋಗದಲ್ಲಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ದಯಾನಂದ ವಾರ್ಡ್‌ನಲ್ಲಿ 3.5 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಸಿಬಿಎಸ್‌ಇ ಪಠ್ಯಕ್ರಮದ ಶಾಲೆಯನ್ನು ಕಾನೂನು ಸಚಿವ ಎಸ್. ಸುರೇಶ್ ಕುಮಾರ್ ಶನಿವಾರ ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಅವರು ಮಾತನಾಡಿ, `ಆರ್ಥಿಕವಾಗಿ ದುರ್ಬಲರಾಗಿರುವ ಕುಟುಂಬಗಳ ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆಯಲೆಂದು ಈ ಶಾಲೆಯನ್ನು ಆರಂಭಿಸಲಾಗಿದೆ. ಕೆಳವರ್ಗದ ನಾಗರಿಕರೇ ಹೆಚ್ಚಿರುವ ಈ ಪ್ರದೇಶದಲ್ಲಿ ಗುಣಮಟ್ಟದ ಶಿಕ್ಷಣವನ್ನು ಮಕ್ಕಳಿಗೆ ನೀಡಲು ಈ ಶಾಲೆ ನೆರವಾಗಲಿದೆ. ಈ ಶಾಲಾ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸಿದ್ದ ಭಾರತೀಯ ವಿದ್ಯಾಭವನದ ಸ್ಥಾಪಕ ಮತ್ತೂರು ಕೃಷ್ಣಮೂರ್ತಿ ಅವರ ಸದಾಶಯದಂತೆ ದೇಶಕ್ಕೆ ಸತ್ಪ್ರಜೆಗಳನ್ನು ನೀಡುವಲ್ಲಿ ನೆರವಾಗಬೇಕು~ ಎಂದರು.ಗಾಂಧಿನಗರದ ಶಾಸಕ ದಿನೇಶ್ ಗುಂಡೂರಾವ್, ಭಾರತೀಯ ವಿದ್ಯಾಭವನದ ನಿರ್ದೇಶಕ ಸುರೇಶ್, ಬಿಬಿಎಂಪಿ ಸದಸ್ಯರಾದ ಶಕೀಲಾ ಮುನಿರಾಜು, ಕೃಷ್ಣಪ್ಪ, ಪದ್ಮರಾಜ್ ಉಪಸ್ಥಿತರಿದ್ದರು. 2800 ಚದರ ಮೀಟರ್ ವಿಸ್ತೀರ್ಣದ ಈ ಕಟ್ಟಡ ಮೂರು ಮಹಡಿ ಎತ್ತರ ಹೊಂದಿದೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.