ಸೋಮವಾರ, ಮಾರ್ಚ್ 27, 2023
24 °C
ಮೈದುಂಬಿ ಹರಿಯುತ್ತಿರುವ ಕೃಷ್ಣಾ, ಉಪ ನದಿಗಳು

ರಾಜಾಪುರ ಬ್ಯಾರೆಜ್‌ನಿಂದ 1.35 ಲಕ್ಷ ಕ್ಯೂಸೆಕ್ ನೀರು ಹೊರಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜಾಪುರ ಬ್ಯಾರೆಜ್‌ನಿಂದ 1.35 ಲಕ್ಷ ಕ್ಯೂಸೆಕ್ ನೀರು ಹೊರಕ್ಕೆ

ಬೆಳಗಾವಿ: ಮಹಾರಾಷ್ಟ್ರದ ರಾಜಾಪುರ ಬ್ಯಾರೆಜ್ ನಿಂದ 1.35 ಲಕ್ಷ ಕ್ಯೂಸೆಕ್ ನೀರು ಹೊರ ಬಿಡಲಾಗಿದೆ. ಕಣೇರಿ, ವಾರಣಾ, ರಾಧಾನಗರಿ ಜಲಾಶಯದಿಂದ ನೀರು ಹೊರಬಿಡಲಾದ್ದು, ಬೆಳಗಾವಿ ಜಿಲ್ಲೆಯಲ್ಲಿ ಹರಿಯುವ ಕೃಷ್ಣಾ ಹಾಗೂ ಉಪ ನದಿಗಳ ಹರಿವು ಶನಿವಾರ ಹೆಚ್ಚಳವಾಗಿದೆ.ಕಣೇರಿ ಜಲಾಶಯದಿಂದ 9,572 ಕ್ಯುಸೆಕ್, ವಾರಣಾ ಜಲಾಶಯದಿಂದ 21,200 ಕ್ಯೂಸೆಕ್, ರಾಧಾನಗರಿ ಜಲಾಶಯದಿಂದ 12,196 ಕ್ಯೂಸೆಕ್ ಹೊರಬಿಡಲಾಗಿದೆ. ಇದರಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ ಕೃಷ್ಣಾ ಹಾಗೂ ಉಪ ನದಿಗಳು ಮೈದುಂಬಿ ಹರಿಯುತ್ತಿವೆ. ಬೆಳಗಾವಿ, ಖಾನಾಪುರ, ಅಥಣಿಯಲ್ಲಿ ಮಳೆ ಮುಂದುವರಿದಿದೆ.ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಸುಕ್ಷೇತ್ರ ನರಸಿಂಹವಾಡಿಯ ದತ್ತ ಮಂದಿರ ಕ್ರಷ್ಣಾ ಮತ್ತು ಪಂಚಗಂಗಾ ನದಿ ಸಂಗಮ ಸ್ಥಾನದಲ್ಲಿ ಮುಳುಗಡೆಯಾಗಿದೆ. ಚಿಕ್ಕೋಡಿ ಬಳಿ ಕೃಷ್ಣಾ ನದಿ ತುಂಬಿ ಹರಿಯುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.