ಮಂಗಳವಾರ, ಮೇ 17, 2022
26 °C

ರಾಜಾ, ಬಲ್ವಾ ಸಿಬಿಐ ಕಸ್ಟಡಿ ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಐಎಎನ್‌ಎಸ್): 2ಜಿ ತರಂಗಾಂತರ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಸಿಬಿಐ ನ್ಯಾಯಾಲಯವೊಂದು ಸೋಮವಾರ ಮಾಜಿ ಟೆಲಿಕಾಂ ಸಚಿವ ಎ. ರಾಜಾ ಮತ್ತು ಡಿ.ಬಿ. ರಿಯಾಲಿಟಿ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಶಾಹಿದ್ ಉಸ್ಮಾನ್ ಬಲ್ವಾ ಅವರ ಬಂಧನವನ್ನು ಕ್ರಮವಾಗಿ ಮೂರು ಮತ್ತು ನಾಲ್ಕು ದಿನಗಳ ಕಾಲ ವಿಸ್ತರಿಸಿದೆ.ಸಿಬಿಐ ವಿಶೇಷ ನ್ಯಾಯಾಧೀಶ ಒ.ಪಿ.ಸೈನಿ ಅವರು ಈ ಆದೇಶ ನೀಡಿದರು. ಹಗರಣದ ಪಿತೂರಿಗಳ ಬಗ್ಗೆ ತಿಳಿದುಕೊಳ್ಳುವ ಸಲುವಾಗಿ ಫೆ.10ರಂದು ಈ ಇಬ್ಬರನ್ನು ನ್ಯಾಯಾಲಯವು ನಾಲ್ಕು ದಿನಗಳ ಸಿಬಿಐ ಕಸ್ಟಡಿಗೆ ಒಪ್ಪಿಸಿತ್ತು. ಬಲ್ವಾ ಅವರ ಸ್ವಾನ್ ಟೆಲಿಕಾಂ ತರಂಗಾಂತರ ಹಂಚಿಕೆಯಲ್ಲಿ ಲಾಭ ಗಳಿಸಿದೆ, ಇದರಿಂದ ರಾಷ್ಟ್ರದ ಬೊಕ್ಕಸಕ್ಕೆ 22 ಸಾವಿರ ಕೋಟಿ ರೂಪಾಯಿಗಳ ನಷ್ಟವಾಗಿದೆ ಎಂದು ಆರೋಪಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.