ಗುರುವಾರ , ಮೇ 26, 2022
30 °C

ರಾಜಿ ಸಾಧ್ಯವಿಲ್ಲ ಎಲ್.ಕೆ.ಅಡ್ವಾಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇಟಾನಗರ (ಪಿಟಿಐ):  ಅರುಣಾಚಲ ಪ್ರದೇಶವು ಭಾರತದ ಅವಿಭಾಜ್ಯ ಅಂಗ. ಈ ವಿಷಯದ ಬಗ್ಗೆ ಯಾವುದೇ ರಾಜಿ ಸಾಧ್ಯವಿಲ್ಲ ಎಂದು ಬಿಜೆಪಿ ನಾಯಕ ಎಲ್.ಕೆ. ಅಡ್ವಾಣಿ ಗುರುವಾರ ಸ್ಪಷ್ಟಪಡಿಸಿದರು.

ಇಲ್ಲಿಗೆ ಸಮೀಪದ ನಾಹರ್ಲಗನ್‌ನಲ್ಲಿ ತಮ್ಮ ಯಾತ್ರೆ ಪ್ರಯುಕ್ತ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ತಮ್ಮ ಪಕ್ಷದ ನಿಲುವು ಸ್ಪಷ್ಟವಾಗಿದೆ. ಈ ಭೂಪ್ರದೇಶದ ಬಗ್ಗೆ  ಚೀನಾ ಹೇಳಿಕೆ ನೀಡಿದ್ದರು ಕೂಡ ಈ ವಿಷಯದಲ್ಲಿ ಪಕ್ಷ ರಾಜಿ ಮಾಡಿಕೊಳ್ಳುವುದಿಲ್ಲ ಎಂದರು. ಚೀನಾ ಅಧ್ಯಕ್ಷ ಹೂ ಜಿಂಟಾವೊ ನವದೆಹಲಿಗೆ ಭೇಟಿ ನೀಡಿದ್ದಾಗ ಅವರಿಗೆ ಮನವರಿಕೆ ಮಾಡಲಾಗಿದೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.