ರಾಜೀನಾಮೆಗೆ ಗೊಗೊಯ್ ನಿರ್ಧಾರ

ಗುವಾಹಟಿ (ಪಿಟಿಐ): ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಕಳಪೆ ಪ್ರದರ್ಶನದ ಹೊಣೆ ಹೊತ್ತು ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಅಸ್ಸಾಂ ಮುಖ್ಯಮಂತ್ರಿ ತರುಣ್ ಗೊಗೊಯ್ ಶುಕ್ರವಾರ ಘೋಷಿಸಿದ್ದಾರೆ.
‘ರಾಜ್ಯದಲ್ಲಿ ಪಕ್ಷದ ಪ್ರದರ್ಶನದ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸುತ್ತೇನೆ’ ಎಂದು ಗೊಗೊಯ್ ಗುವಾಹಟಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.
‘ಇದು ಭಾವನಾತ್ಮಕ ನಿರ್ಧಾರವಲ್ಲ. ಇದೊಂದು ತಾತ್ಕಾಲಿಕ ಹಿನ್ನಡೆಯಷ್ಟೇ. ಈ ಹಿಂದೆಯೂ ಇಂತಹ ಪರಿಸ್ಥಿತಿಯನ್ನು ನಾನು ಕಂಡಿದ್ದೇನೆ. ನಂತರ ಪಕ್ಷವು ಪುಟಿದು ನಿಂತಿತ್ತು’ ಎಂದು ಅವರು ಹೇಳಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.