ಬುಧವಾರ, ನವೆಂಬರ್ 13, 2019
23 °C

`ರಾಜೀನಾಮೆಯಿಂದ ಹಾನಿಯಿಲ್ಲ'

Published:
Updated:

ಬೆಂಗಳೂರು: `ಶಾಸಕರ ರಾಜೀನಾಮೆಯಿಂದ ಪಕ್ಷಕ್ಕೆ ಯಾವುದೇ ಹಾನಿ ಇಲ್ಲ. ಅವರ ರಾಜೀನಾಮೆಯಿಂದ ತೆರವಾಗುವ ಕ್ಷೇತ್ರಗಳಲ್ಲಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಕಣಕ್ಕೆ ಇಳಿಸಲಾಗುವುದು' ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ರಘುನಾಥರಾವ್ ಮಲ್ಕಾಪುರೆ ಗುರುವಾರ ಇಲ್ಲಿ ತಿಳಿಸಿದರು.ಸುರಪುರದ ರಾಜುಗೌಡ, ಜಗಳೂರಿನ ಎಸ್.ವಿ.ರಾಮಚಂದ್ರ, ಚನ್ನಗಿರಿಯ ಮಾಡಾಳ್ ವಿರೂಪಾಕ್ಷಪ್ಪ ಅವರು ಬೇರೆ ಪಕ್ಷಕ್ಕೆ ಸೇರುವ ಸಲುವಾಗಿ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಇವರಿಗೆ ವೈಯಕ್ತಿಕ ಹಿತಾಸಕ್ತಿಯೇ ಮುಖ್ಯ. ಇಂತಹವರಿಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ಟೀಕಿಸಿದರು.ಅಧಿಕಾರಕ್ಕೆ ಬಂದೇ ಬಿಟ್ಟೆವು ಎಂದು ಬೀಗುತ್ತಿರುವ ಕಾಂಗ್ರೆಸ್ಸಿಗರಲ್ಲಿ ಆಂತರಿಕ ಕಲಹ ಹೆಚ್ಚಾಗಿದೆ. ಕೆಪಿಸಿಸಿ ಕಚೇರಿ ಮುಂದೆ ನಿತ್ಯ ಪ್ರತಿಭಟನೆಗಳು ನಡೆಯುತ್ತಿದ್ದು, ಕರ್ಫ್ಯೂ ವಿಧಿಸುವ ಸ್ಥಿತಿ ನಿರ್ಮಾಣವಾಗಿದೆ. ಇದನ್ನು ನಿಯಂತ್ರಿಸಬೇಕಿದ್ದ ಆ ಪಕ್ಷದ ನಾಯಕರು ತಮ್ಮ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ ಎಂದು ಟೀಕಿಸಿದರು.

ಪ್ರತಿಕ್ರಿಯಿಸಿ (+)