ಗುರುವಾರ , ಮೇ 6, 2021
27 °C

ರಾಜೀನಾಮೆ ಕೇಳುವುದೇ ಕಸುಬು- ಮೊಯಿಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: `ವಿರೋಧ ಪಕ್ಷಗಳಿಗೆ ರಾಜೀನಾಮೆ ಕೇಳುವುದೇ ಕಸುಬಾಗಿದೆ. ರಾಜೀನಾಮೆ ಕೇಳುವುದಕ್ಕೂ ಒಂದು ಜವಾಬ್ದಾರಿ ಇರಬೇಕು. ಇಂಥ ಒತ್ತಡಗಳಿಗೆ ಸೊಪ್ಪು ಹಾಕಲು ಆಗುವುದಿಲ್ಲ~...

ಕೇಂದ್ರ ಗೃಹ ಸಚಿವ ಪಿ.ಚಿದಂಬರಂ ಅವರ ರಾಜೀನಾಮೆಗೆ ವಿರೋಧ ಪಕ್ಷಗಳು ಒತ್ತಡ ಹಾಕುತ್ತಿರುವ ಬಗ್ಗೆ ಕೇಂದ್ರದ ಕಾರ್ಪೊರೇಟ್ ವ್ಯವಹಾರಗಳ ಸಚಿವ ವೀರಪ್ಪ ಮೊಯಿಲಿ ಅವರ ಪ್ರತಿಕ್ರಿಯೆ ಇದು.ನಗರದ ಸೇಂಟ್ ಆಗ್ನೆಸ್ ಕಾಲೇಜಿನಲ್ಲಿ ಶುಕ್ರವಾರ ವಿಚಾರ ಸಂಕಿರಣದಲ್ಲಿ ಭಾಗವಹಿಸಿದ ನಂತರ ಪತ್ರಕರ್ತರ ಜತೆ ಮಾತನಾಡಿದ ಅವರು, `2ಜಿ ತರಂಗಾಂತರ ಹಗರಣ ವಿಚಾರ ಸುಪ್ರೀಂ ಕೋರ್ಟ್‌ನಲ್ಲಿದೆ. ಸುಬ್ರಹ್ಮಣಿಯನ್ ಸ್ವಾಮಿ ಅಂಥವರಿಗೆ ಅರ್ಜಿ ಹಾಕುವುದೇ ಕೆಲಸ~ ಎಂದು ಸಚಿವರು ಟೀಕಿಸಿದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.