ರಾಜೀನಾಮೆ ಕೊಡೊಲ್ಲ: ಈಶ್ವರಪ್ಪ

7

ರಾಜೀನಾಮೆ ಕೊಡೊಲ್ಲ: ಈಶ್ವರಪ್ಪ

Published:
Updated:

ಬೆಂಗಳೂರು: `ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ನನ್ನ ವಿರುದ್ಧ ಮೊಕದ್ದಮೆ ದಾಖಲಿಸಿದ್ದಾರೆ. ಆದರೆ ಅದಕ್ಕಾಗಿ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಅಗತ್ಯ ಇಲ್ಲ' ಎಂದು ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಬುಧವಾರ ಇಲ್ಲಿ ಸ್ಪಷ್ಟಪಡಿಸಿದರು.

ವಿಧಾನಸೌಧದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರ ಜತೆ ಅವರು ಮಾತನಾಡಿದರು.`ಖಾಸಗಿ ವ್ಯಕ್ತಿಯೊಬ್ಬರು ಸಲ್ಲಿಸಿರುವ ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆಗೂ ಮುನ್ನ ಮೊಕದ್ದಮೆ ದಾಖಲಿಸಿದ್ದಾರೆ. ಸತ್ಯ ಏನು ಎನ್ನುವುದನ್ನು ಅರಿಯದ ಪ್ರತಿಪಕ್ಷಗಳು ರಾಜೀನಾಮೆಗೆ ಒತ್ತಾಯಿಸುವುದರಲ್ಲಿ ಅರ್ಥ ಇಲ್ಲ' ಎಂದು ಅವರು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry