ಗುರುವಾರ , ಫೆಬ್ರವರಿ 25, 2021
30 °C

ರಾಜೀವ್‌ ಹಂತಕರ ಬಿಡುಗಡೆಗೆ ಸುಪ್ರೀಂ ತಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜೀವ್‌ ಹಂತಕರ ಬಿಡುಗಡೆಗೆ ಸುಪ್ರೀಂ ತಡೆ

ನವದೆಹಲಿ (ಪಿಟಿಐ): ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಏಳು ಅಪರಾಧಿಗಳನ್ನು ಬಿಡುಗಡೆಗೊಳಿಸುವ ತಮಿಳುನಾಡು ಸರ್ಕಾರದ ನಿರ್ಧಾರಕ್ಕೆ ಗುರುವಾರ ಸುಪ್ರೀಂ ಕೋರ್ಟ್‌ ತಡೆ ನೀಡಿದೆ.

ತಮಿಳುನಾಡು ಸರ್ಕಾರದ ನಿರ್ಧಾರ ಪ್ರಶ್ನಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಮೆಲ್ಮನವಿ ಸಲ್ಲಿಸಿತ್ತು.  ಮುಖ್ಯ ನ್ಯಾಯಮೂರ್ತಿ ಪಿ.ಸದಾಶಿವಂ ಇಂದು ನೇತೃತ್ವದ ಮುಂದೆ ಹಾಜರಾದ ಸಾಲಿಸಿಟರ್ ಜನರಲ್ ಮೋಹನ್ ಪರಾಸರನ್ ಅವರು ರಾಜೀವ್ ಹತ್ಯೆ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಮೂವರು ಅಪರಾಧಿಗಳ ಶಿಕ್ಷೆಯನ್ನು ಕೋರ್ಟ್ ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಿದ್ದನ್ನು ಪ್ರಶ್ನಿಸಿರುವ ಅರ್ಜಿಯ ವಿಚಾರಣೆಯು ಮುಗಿಯುವವರೆಗೂ ತಮಿಳುನಾಡು ಸರ್ಕಾರ ಏಳು ಅಪರಾಧಿಗಳನ್ನು ಬಿಡುಗಡೆಗೊಳಿಸದಂತೆ ತಡೆಯಾಜ್ಞೆ ನೀಡಬೇಕೆಂದು ಮನವಿ ಮಾಡಿಕೊಂಡರು.ಪರಾಸರನ್ ಅವರ ಮನವಿಗೆ ಸ್ಪಂದಿಸಿದ ಪೀಠವು ಅರ್ಜಿ ವಿಚಾರಣೆ ಕೈಗೆತ್ತಿಕೊಂಡು ತಡೆಯಾಜ್ಞೆ ನೀಡಿತು.ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಅವರ ಹತ್ಯೆಯಲ್ಲಿ ಭಾಗಿಯಾಗಿದ್ದ ಮೂವರು ಹಂತಕರ ಗಲ್ಲು ಶಿಕ್ಷೆಯನ್ನು ಸುಪ್ರೀಂ­ಕೋರ್ಟ್‌ ಜೀವಾವಧಿಗೆ ಪರಿವರ್ತಿಸಿದ ಮರು­ದಿನವೇ,  ಇದೇ  ಪ್ರಕರಣದಲ್ಲಿ ಶಿಕ್ಷೆ­ಗೊಳ­ಗಾಗಿ 23 ವರ್ಷ­ಗಳಿಂದ ಕಾರಾ­ಗೃಹ­ದಲ್ಲಿರುವ ಎಲ್ಲ ಏಳು ಹಂತಕರನ್ನು ಬಿಡುಗಡೆ ಮಾಡಲು ತಮಿಳುನಾಡು ಸರ್ಕಾರ ತೀರ್ಮಾನಿ­ಸಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.