ಶುಕ್ರವಾರ, ಜೂನ್ 25, 2021
24 °C

ರಾಜೀವ್‌ ಹತ್ಯೆ ಪ್ರಕರಣ: ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಹತ್ಯೆ ಪ್ರಕರಣದ ಏಳು ಜನ ಆರೋಪಿಗಳನ್ನು ಬಿಡುಗಡೆ ಮಾಡುವ ತಮಿಳುನಾಡು ಸರ್ಕಾರದ ನಿರ್ಧಾರ ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮಾ. 26ಕ್ಕೆ ಮುಂದೂಡಿದೆ.



ತಮಿಳುನಾಡಿನ ವಾದಕ್ಕೆ ಪ್ರತ್ಯುತ್ತರ ಸಲ್ಲಿಸಲು ತನಗೆ ಮತ್ತಷ್ಟು ಕಾಲಾವಕಾಶ ಬೇಕು ಎಂದು ಕೇಂದ್ರ ತಿಳಿಸಿದ್ದು, ಅಂತಿಮ ವಿಚಾರಣೆ ಮಾ. 26ಕ್ಕೆ ನಡೆಸಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ಪಿ. ಸದಾಶಿವಂ ನೇತೃತ್ವದ ಪೀಠ ತಿಳಿಸಿತು.



ಜೀವಾವಧಿ ಶಿಕ್ಷೆ ಅನುಭವಿ­ಸುತ್ತಿರುವ ಆರೋಪಿಗಳನ್ನು ಬಿಡುಗಡೆ ಮಾಡುವ ತಮಿಳುನಾಡು ಸರ್ಕಾರದ ತೀರ್ಮಾನಕ್ಕೆ ತಡೆಯೊಡ್ಡಿ ಈ ಹಿಂದೆ ಸುಪ್ರೀಂಕೋರ್ಟ್ ಆದೇಶ ನೀಡಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.