ಬುಧವಾರ, ಮಾರ್ಚ್ 3, 2021
23 °C

ರಾಜು ಹತ್ಯೆ: ಐವರು ಶಂಕಿತರ ವಿಚಾರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜು ಹತ್ಯೆ: ಐವರು ಶಂಕಿತರ ವಿಚಾರಣೆ

ಮೈಸೂರು:  ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಕಾರ್ಯಕರ್ತ ಕ್ಯಾತಮಾರನಹಳ್ಳಿ ರಾಜು ಹತ್ಯೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು, ಐವರು ಶಂಕಿತ ಆರೋಪಿಗಳನ್ನು ಸೋಮವಾರ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಉದಯಗಿರಿ ಹಾಗೂ ಹುಣಸೂರು ನಿವಾಸಿಗಳು ಹಾಗೂ ಮುಸ್ಲಿಂ ಸಂಘಟನೆಯೊಂದರ ಕಾರ್ಯಕರ್ತರು ಆರೋಪಿಗಳು ಎಂದು ಗುರುತಿಸಲಾಗಿದೆ. ಹುಣಸೂರು ವಿದ್ಯಾರ್ಥಿಗಳನ್ನು ಅಪಹರಿಸಿ ಕೊಲೆ ಮಾಡಿದ ಪ್ರಕರಣದಲ್ಲಿಯೂ ಇವರು ಭಾಗಿಯಾಗಿದ್ದರು ಎಂದು ಮೂಲಗಳು ತಿಳಿಸಿವೆ.‘ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಕೃತ್ಯದಲ್ಲಿ ಭಾಗಿಯಾಗಿರುವುದು ವಿಚಾರಣೆ ವೇಳೆ ಖಚಿತವಾದರೆ ಬಂಧಿಸಲಾಗುವುದು’ ಎಂದು ನಗರ ಪೊಲೀಸ್‌ ಕಮಿಷನರ್‌ ಬಿ.ದಯಾನಂದ  ಅವರು ಸುದ್ದಿಗಾರರಿಗೆ ತಿಳಿಸಿದರು. ಮಾರ್ಚ್‌ 13ರಂದು ಉದಯಗಿರಿ ಮಹಾತ್ಮ ಗಾಂಧಿ ರಸ್ತೆಯ ಅಂಗಡಿಯೊಂದರಲ್ಲಿ ರಾಜು ಟೀ ಸೇವಿಸುತ್ತಿದ್ದ ವೇಳೆ ದುಷ್ಕರ್ಮಿಗಳು ದಾಳಿ ನಡೆಸಿದ್ದರು.ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಈ ಘಟನೆಯನ್ನು ಖಂಡಿಸಿ ಮಾರ್ಚ್‌ 14ರಂದು ಬಿಜೆಪಿ ನಡೆಸಿದ್ದ ಮೈಸೂರು ಬಂದ್‌ ಸಂದರ್ಭದಲ್ಲಿ

ಕೂಡ ಸಾಕಷ್ಟು ಹಿಂಸಾಚಾರಗಳು ನಡೆದಿದ್ದವು.***

ರಾಜು ಹತ್ಯೆ ಪ್ರಕರಣವನ್ನು ಪೊಲೀಸ್‌ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ತನಿಖೆಯನ್ನು ಚುರುಕುಗೊಳಿಸಲಾಗಿದ್ದು, ಕೆಲವೇ ದಿನಗಳಲ್ಲಿ ಆರೋಪಿಗಳನ್ನು ಬಂಧಿಸಲಾಗುವುದು

-ಡಾ.ಜಿ.ಪರಮೇಶ್ವರ, ಗೃಹ ಸಚಿವ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.