ಶನಿವಾರ, ಮಾರ್ಚ್ 6, 2021
18 °C

ರಾಜೇ ಬೆಂಬಲಕ್ಕೆ ನಿಂತ ಗಡ್ಕರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜೇ ಬೆಂಬಲಕ್ಕೆ ನಿಂತ ಗಡ್ಕರಿ

ಜೈಪುರ (ಪಿಟಿಐ): ಲಲಿತ್ ಮೋದಿ ವೀಸಾ ಹಗರಣದಲ್ಲಿ ಭಾಗಿಯಾದ ಆರೋಪಕ್ಕೊಳಗಾಗಿರುವ ರಾಜಸ್ತಾನ ಮುಖ್ಯಮಂತ್ರಿ ವಸುಂಧರಾ ರಾಜೇ ಅವರನ್ನು ಸೋಮವಾರ ಭೇಟಿ ಮಾಡಿದ ಕೇಂದ್ರ ಸಚಿವ ನಿತಿನ್‌ ಗಡ್ಕರಿ, ರಾಜೇ ಅವರ ಬೆಂಬಲಕ್ಕೆ ನಿಂತಿದ್ದಾರೆ.

‘ವಸುಂಧರಾ ರಾಜೇ ಅವರ ವಿರುದ್ಧದ ಆರೋಪಗಳು ಆಧಾರ ರಹಿತವಾದಂಥವು. ರಾಜೇ ಯಾವುದೇ ತಪ್ಪು ಮಾಡಿಲ್ಲ. ಇಂತಹ ವಿಚಾರಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ಸರಿಯಲ್ಲ’ ಎಂದು ಗಡ್ಕರಿ ಹೇಳಿದ್ದಾರೆ.

‘ರಾಜೇ ಕಾನೂನು ಮತ್ತು ನೈತಿಕ ವಿಷಯಗಳಲ್ಲಿ ಸಂಪೂರ್ಣ ಸರಿಯಾಗಿದ್ದಾರೆ. ಲಲಿತ್‌ ಮೋದಿ ಪ್ರಕರಣದಲ್ಲಿ ಅವರ ತಪ್ಪು ಎಲ್ಲೂ ಕಂಡುಬಂದಿಲ್ಲ’ ಎಂದು ಗಡ್ಕರಿ ತಿಳಿಸಿದ್ದಾರೆ.

‘ರಾಜೇ ಅವರ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡಲಾಗುತ್ತಿದೆ. ಈ ರೀತಿಯ ದ್ವೇಷದ ರಾಜಕಾರಣ ಮಾಡುವುದು ಸರಿಯಲ್ಲ’ ಎಂದಿರುವ ಗಡ್ಕರಿ, ‘ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ರಾಜೇ ಅವರ ಬೆನ್ನಿಗಿದೆ’ ಎಂದು ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.