ರಾಜ್ಯಕ್ಕೆ 23ರಂದು ರಾಷ್ಟ್ರಪತಿ ಪ್ರಣವ್

7

ರಾಜ್ಯಕ್ಕೆ 23ರಂದು ರಾಷ್ಟ್ರಪತಿ ಪ್ರಣವ್

Published:
Updated:

ಬೆಳಗಾವಿ: ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಇದೇ 23 ರಿಂದ ಎರಡು ದಿನಗಳ ಕಾಲ ರಾಜ್ಯದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.ಅವರು 23 ರಂದು ಮೈಸೂರಿನಲ್ಲಿ ಜೆಎಸ್‌ಎಸ್ ಆಸ್ಪತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಾರೆ.24 ರಂದು ವಿಜಾಪುರದ ಸೈನಿಕ ಶಾಲೆಯ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸುವರು. ವಿಜಾಪುರಕ್ಕೆ ತೆರಳಲು ಅವರು ಬೆಳಗಾವಿಗೆ ವಿಶೇಷ ವಿಮಾನದಲ್ಲಿ ಬರುವರು. ಅಲ್ಲಿಂದ ಹೆಲಿಕಾಪ್ಟರ್‌ನಲ್ಲಿ ವಿಜಾಪುರಕ್ಕೆ ತೆರಳಿ, ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಬೆಳಗಾವಿಗೆ ಹಿಂತಿರುಗಿ ಅಲ್ಲಿಂದ ವಿಮಾನದಲ್ಲಿ ಚೆನ್ನೈಗೆ ತೆರಳುವರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry