ಭಾನುವಾರ, ಜುಲೈ 25, 2021
28 °C

ರಾಜ್ಯದಲ್ಲಿ ಭದ್ರತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಭಯೋತ್ಪಾದಕ ಒಸಾಮಾ ಬಿನ್ ಲಾಡೆನ್ ಹತ್ಯೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ ಅಮೆ ರಿಕ ಮೂಲದ ಎಲ್ಲ ಸಂಸ್ಥೆ ಮತ್ತು ಕಂಪೆನಿಗಳಿಗೆ ಅಗತ್ಯ ಭದ್ರತೆ ಒದಗಿಸ ಲಾಗುವುದು ಎಂದು ಗೃಹ ಸಚಿವ ಆರ್. ಅಶೋಕ ತಿಳಿಸಿದ್ದಾರೆ.ಮುಖ್ಯಮಂತ್ರಿಗಳ ಗೃಹಕಚೇರಿ ‘ಕೃಷ್ಣಾ’ದಲ್ಲಿ ಸೋಮವಾರ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು, ಲಾಡೆನ್ ಹತ್ಯೆಯ ಹಿನ್ನೆಲೆ ಯಲ್ಲಿ ರಾಜ್ಯದ ಜನತೆ ಯಾವುದೇ ರೀತಿಯಲ್ಲೂ ಭೀತಿಗೆ ಒಳಗಾಗ ಬೇಕಿಲ್ಲ.ಕೇಂದ್ರ ಸರ್ಕಾರದ ನಿರ್ದೇಶನದಂತೆ ಸೂಕ್ತ ಭದ್ರತಾ ಕ್ರಮ ಕೈಗೊಳ್ಳಲಾಗುವುದು ಎಂದರು.‘ಕೇಂದ್ರದಿಂದ ವಿಶೇಷ ಎಚ್ಚರಿಕೆ ಏನೂ ಬಂದಿಲ್ಲ, ಕೇಂದ್ರದ ಭದ್ರತಾ ಸಂಸ್ಥೆಗಳು ಕಾಲಕಾಲಕ್ಕೆ ಕಳುಹಿಸುವ ಸೂಚನೆಯನ್ನಾಧರಿಸಿ ಅಗತ್ಯ ರಕ್ಷಣಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು’ ಎಂದು ಸ್ಪಷ್ಟಪಡಿಸಿದರು.

ಇದಕ್ಕೂ ಮೊದಲು ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಅಮೆರಿಕ ಕುಖ್ಯಾತ ಭಯೋತ್ಪಾದನನ್ನು ಹತ್ತಿಕುವ ಕೆಲಸ ಮಾಡಿದೆ ಎಂದು ಪ್ರಶಂಸಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.