ಬುಧವಾರ, ನವೆಂಬರ್ 20, 2019
21 °C

ರಾಜ್ಯದಲ್ಲಿ ಹಲವೆಡೆ ಮಳೆ

Published:
Updated:

ಬೆಂಗಳೂರು: ಶುಕ್ರವಾರ ಬೆಳಿಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಉತ್ತರ ಒಳನಾಡಿನಲ್ಲಿ ಮಳೆಯಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆದಿದೆ. ಔರದ್‌ನಲ್ಲಿ 3 ಸೆ.ಮೀ.ಮಳೆಯಾಗಿದೆ. ಬಾಲ್ಕಿ 2, ಬಸವಕಲ್ಯಾಣ, ಸಂತಪುರದಲ್ಲಿ ತಲಾ ಒಂದು ಸೆಂ.ಮೀ.ಮಳೆಯಾಗಿದೆ. ಬಳ್ಳಾರಿಯಲ್ಲಿ ಗರಿಷ್ಠ ಉಷ್ಣಾಂಶ 41.0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ರಾಜ್ಯದಾದ್ಯಂತ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರತಿಕ್ರಿಯಿಸಿ (+)