ಮಂಗಳವಾರ, ಮೇ 24, 2022
28 °C

ರಾಜ್ಯದಲ್ಲಿ 5 ಲಕ್ಷ ಆಶ್ರಯ ಮನೆ ನಿರ್ಮಾಣ : ಸೋಮಣ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳ್ತಂಗಡಿ: ರಾಜ್ಯದ್ಲ್ಲಲಿ ಪ್ರಸಕ್ತ ಆರ್ಥಿಕ ವರ್ಷ ಐದು ಲಕ್ಷ ಆಶ್ರಯ ಮನೆಗಳನ್ನು ನಿರ್ಮಿಸಲಾಗುವುದು. ಇಂದಿರಾ ವಸತಿ ಯೋಜನೆಯಡಿ ಒಂದು ಲಕ್ಷ ಮನೆ ಹಾಗೂ ಬಸವ ಸಮಿತಿ ವಸತಿ ಯೋಜನೆಯಡಿಯಲ್ಲಿ ನಾಲ್ಕು ಲಕ್ಷ ಮನೆ- ಹೀಗೆ ಒಟ್ಟು ಐದು ಲಕ್ಷ ಮನೆಗಳ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ ಎಂದು ವಸತಿ ಖಾತೆ ಸಚಿವ ವಿ.ಸೋಮಣ್ಣ ಹೇಳಿದರು.ಧರ್ಮಸ್ಥಳದಲ್ಲಿ ಗುರುವಾರ ಶ್ರೀ ಸನ್ನಿಧಿ ಅತಿಥಿ ಗೃಹದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. `ನನ್ನ ಮನೆ, ನನ್ನ ಸೊತ್ತು~ ಕಾರ್ಯಕ್ರಮದಡಿ ಈಗಾಗಲೆ 20 ಲಕ್ಷ ಮನೆಗಳನ್ನು ನಿರ್ಮಿಸಲಾಗಿದೆ ಎಂದು ಸಚಿವರು ತಿಳಿಸಿದರು.ಬೆಳ್ತಂಗಡಿ ತಾಲ್ಲೂಕಿನಲ್ಲಿರುವ ನಕ್ಸಲ್ ಪೀಡಿತ 12 ಗ್ರಾಮಗಳ ವ್ಯಾಪ್ತಿಯಲ್ಲಿರುವ ವಸತಿರಹಿತರಿಗೆ ಸರ್ಕಾರದ ವತಿಯಿಂದ ಅವರು ವಾಸ್ತವ್ಯ ಇರುವ ಸ್ಥಳದಲ್ಲೇ ಮನೆಗಳನ್ನು ನಿರ್ಮಿಸಿಕೊಡಲಾಗುವುದು ಎಂದು ಭರವಸೆ ನೀಡಿದ ಸಚಿವರು ಈ ಬಗ್ಗೆ ತಕ್ಷಣ ಪ್ರಸ್ತಾವನೆ ಕಳುಹಿಸಿ ಕೊಡುವಂತೆ ತಹಸೀಲ್ದಾರ್‌ಗೆ ಆದೇಶ ನೀಡಿದರು.ದೇವರ ದರ್ಶನದ ನಂತರ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರೊಡನೆ ಸಚಿವರು ಮಾತುಕತೆ ನಡೆಸಿದರು. ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.