ರಾಜ್ಯದಾದ್ಯಂತ ಒಣ ಹವೆ

7

ರಾಜ್ಯದಾದ್ಯಂತ ಒಣ ಹವೆ

Published:
Updated:

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಹಲವೆಡೆ ಮಳೆಯಾಗಿದೆ. ಉಳಿದಂತೆ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರಿದಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



ರಾಯಲಪಡುವಿನಲ್ಲಿ 5 ಸೆಂ.ಮೀ ಮಳೆಯಾಗಿದ್ದು, ಕನಕಪುರ 3, ಶ್ರೀನಿವಾಸಪುರ ಮತ್ತು ಬೆಂಗಳೂರು ನಗರ 2, ಮಾಲೂರು, ಬಂಗಾರಪೇಟೆಯಲ್ಲಿ 1 ಸೆಂ. ಮೀ. ಮಳೆಯಾಗಿದೆ. ಬಾಗಲಕೋಟೆಯಲ್ಲಿ 12.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಅಲ್ಲಲ್ಲಿ ತುಂತುರು ಹನಿ ಬೀಳುವ ಸಾಧ್ಯತೆಯಿದ್ದು, ಉಳಿದಂತೆ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ  ನೀಡಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry