ಶನಿವಾರ, ಏಪ್ರಿಲ್ 17, 2021
31 °C

ರಾಜ್ಯದಾದ್ಯಂತ ನರೇಗಾ ಅವ್ಯವಹಾರ :ಸಚಿವ ಮುರುಗೇಶ ನಿರಾಣಿ ಹೇಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗಂಗಾವತಿ : ಕೇಂದ್ರ ಸರ್ಕಾರದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ರಾಜ್ಯದಾದ್ಯಂತ ಅವ್ಯವಹಾರ ನಡೆದಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದು ಬೃಹತ್, ಮಧ್ಯಮ ಕೈಗಾರಿಕಾ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಹೇಳಿದರು.ನಗರದಲ್ಲಿ ವಿವಿಧ ಯೋಜನೆಯಲ್ಲಿ ಕೈಗೊಂಡ ಸುಮಾರು ಒಂದು ನೂರು ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲು ಆಗಮಿಸಿದ್ದ ಅವರು ಅದಕ್ಕೂ ಮುನ್ನ ವೆಂಕಟಗಿರಿ ಗ್ರಾಮದಲ್ಲಿ ನಿರ್ಮಿಸಿದ ಕೆರೆ ಕಾಮಗಾರಿ ಉದ್ಘಾಟಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.ಕೇವಲ ಕೊಪ್ಪಳ ಮಾತ್ರವಲ್ಲ, ರಾಜ್ಯದ ಬಹುತೇಕ ಜಿಲ್ಲೆಗಳ ಗ್ರಾಮ ಪಂಚಾಯಿತಿಗಳಲ್ಲಿ `ನರೇಗಾ~ ಅವ್ಯವಹಾರ ನಡೆದಿದೆ. ಈ ಬಗ್ಗೆ ರಾಜ್ಯ ಸರ್ಕಾರದ ಗಮನಕ್ಕೆ ಬಂದಿದೆ. ಅವ್ಯವಹಾರ ತಡೆಗಟ್ಟುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.ನರೇಗಾದಲ್ಲಿ ಮಾಡಿದ ಕಾಮಗಾರಿಗಳಿಗೆ ತಕ್ಷಣ ಬಿಲ್ ಪಾವತಿಸದಂತೆ ತಡೆಹಿಡಿಯಲು ಸೂಚಿಸಲಾಗಿದೆ. ಮೂರನೇ ವ್ಯಕ್ತಿ (ಥರ್ಡ್ ಪಾರ್ಟಿ) ಪರಿಶೀಲಿಸಿ ವರದಿ ನೀಡಿದ ಬಳಿಕ ಹಣ ಪಾವತಿಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.ಕೆಲವೆಡೆ ಮೂರನೇ ವ್ಯಕ್ತಿಯ ವರದಿಗಳು ಕೂಡ ದೋಷ ಪೂರಿತವಾಗಿವೆ ಎಂದು ಪತ್ರಕರ್ತರು ಗಮನ ಸೆಳೆದಾಗ ಪ್ರತಿಕ್ರಿಯಿಸಿದ ಸಚಿವ ನಿರಾಣಿ, ಪರಿಶೀಲನಾ ತಂಡದ ಮೇಲೆ ಮತ್ತೊಂದು ಪರಿಶೀಲನಾ ತಂಡ ರಚಿಸುತ್ತಾ ಹೋದರೆ ರಾಜ್ಯದಲ್ಲಿ ಯಾವ ಕಾಮಗಾರಿ ಮಾಡಲು ಸಾಧ್ಯವಿಲ್ಲ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.