ಸೋಮವಾರ, ಮೇ 10, 2021
21 °C

ರಾಜ್ಯದಾದ್ಯಂತ ಮುಂಗಾರು ಕ್ಷೀಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ಬುಧವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ. ರಾಜ್ಯದಾದ್ಯಂತ ನೈರುತ್ಯ ಮುಂಗಾರು ಕ್ಷೀಣಿಸಿದೆ.



ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ 4 ಸೆಂ.ಮೀ ಮಳೆಯಾಗಿದೆ. ಅರಸೀಕೆರೆ, ಕುಣಿಗಲ್, ಚಿಕ್ಕನಹಳ್ಳಿ 3, ಪಣಂಬೂರು, ಇಂಡಿ, ಬೇಲೂರು, ಶ್ರವಣಬೆಳಗೊಳ, ಟಿ.ಜಿ.ಹಳ್ಳಿ, ಹೊಸದುರ್ಗ, ಕುಣಿಗಲ್ 2, ಮೂಡುಬಿದಿರೆ, ಕುಂದಾಪುರ, ಕೊಲ್ಲೂರು, ಕಮಲಾಪುರ, ಪೊನ್ನಂಪೇಟೆ, ಆಗುಂಬೆ, ಎ.ಡಿ.ಕೋಟೆ, ತಿಪಟೂರು, ತುರುವೆಕೆರೆ, ಮಾಗಡಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.