ರಾಜ್ಯದ ಕರಾವಳಿಯಲ್ಲಿ ಕಟ್ಟೆಚ್ಚರ
ಬೆಂಗಳೂರು: ಜಪಾನ್ನಲ್ಲಿ ಭೀಕರ ಸುನಾಮಿ ಅಪ್ಪಳಿಸಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಟ್ಟೆಚ್ಚರಕ್ಕೆ ಆದೇಶಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗೆ ಸನ್ನದ್ಧರಾಗಿರುವಂತೆ ಜಿಲ್ಲಾಡಳಿತಕ್ಕೆ ರಾಜ್ಯ ಸರ್ಕಾರ ಶುಕ್ರವಾರ ಮಧ್ಯಾಹ್ನವೇ ಸಂದೇಶ ರವಾನಿಸಿದೆ.
ಈಗ ಜಪಾನ್ನಲ್ಲಿ ಸೃಷ್ಟಿಯಾಗಿರುವ ಸುನಾಮಿಯಿಂದ ಕರ್ನಾಟಕದ ಕರಾವಳಿಗೆ ಯಾವುದೇ ಧಕ್ಕೆ ಆಗುವುದಿಲ್ಲ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ರಾಜ್ಯ ಸರ್ಕಾರಕ್ಕೆ ತಿಳಿಸಿದೆ. ಆದರೂ, ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಮತ್ತು ರಕ್ಷಣಾ ಕಾರ್ಯಾಚರಣೆ ಪಡೆಗಳನ್ನು ಸನ್ನದ್ಧವಾಗಿ ಇಡಲಾಗಿದೆ ಎಂದು ಕಂದಾಯ ಇಲಾಖೆ ತಿಳಿಸಿದೆ.
3 ಜಿಲ್ಲೆಗಳ ವ್ಯಾಪ್ತಿಯಲ್ಲಿ ಮೀನುಗಾರಿಕೆಗೆ ನಿರ್ಬಂಧ ವಿಧಿಸಿದ್ದು, ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ. ಈಗಾಗಲೇ ಮೀನುಗಾರಿಕೆಗೆ ತೆರಳಿರುವವರನ್ನು ಹಿಂದಕ್ಕೆ ಕರೆಸುವಂತೆಯೂ ಜಿಲ್ಲಾಡಳಿತಕ್ಕೆ ಆದೇಶ ನೀಡಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.