ಗುರುವಾರ , ಫೆಬ್ರವರಿ 25, 2021
24 °C

ರಾಜ್ಯದ ಕಾಂಗ್ರೆಸ್ ಆಡಳಿತದಲ್ಲಿ ಅಭಿವೃದ್ಧಿ ಸ್ಥಗಿತ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜ್ಯದ ಕಾಂಗ್ರೆಸ್ ಆಡಳಿತದಲ್ಲಿ ಅಭಿವೃದ್ಧಿ ಸ್ಥಗಿತ’

ಉಡುಪಿ: ‘ಬಿಜೆಪಿ ಆಡಳಿತದ ಅವಧಿ ಯಲ್ಲಿ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳಾದವು. ಕಾಂಗ್ರೆಸ್‌ ಆಡಳಿತ ದಲ್ಲಿ ಅಭಿವೃದ್ಧಿ ಸಂಪೂರ್ಣ ಸ್ಥಗಿತ ವಾಗಿದೆ’ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು.ನಗರದ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ನಡೆದ ಉಡುಪಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.ತುರ್ತು ಪರಿಸ್ಥಿತಿಯ ನಂತರ ಯುವ ಕರು ಜಯಪ್ರಕಾಶ್‌ ನಾರಾಯಣ್‌ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ ವಿರುದ್ಧ ಹೋರಾಟ ಮಾಡಿದರು. ಇಂದು ಸಹ ಯುವ ಸಮೂಹ ಗುಜರಾತ್‌ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ಬೆಂಬಲಕ್ಕೆ ನಿಲ್ಲಬೇಕು. ಮೋದಿ ಅವರು ಈ ದೇಶದ ಪ್ರಧಾನಿ ಆಗುವುದು ಸೂರ್ಯ ಚಂದ್ರರಷ್ಟೇ ಸತ್ಯ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಮಾಜಿ ರಾಷ್ಟ್ರಪತಿ ಅಬ್ದುಲ್‌ ಕಲಾಂ ಅವರು 2020ಕ್ಕೆ ದೇಶ ವಿಶ್ವದಲ್ಲಿಯೇ ಮೊದಲ ಸ್ಥಾನದಲ್ಲಿ ಇರಬೇಕು ಎಂದು ಕನಸು ಕಂಡಿದ್ದರು. ಅದು ನಿಜವಾಗ ಬೇಕಾದರೆ ಬಿಜೆಪಿ ಸರ್ಕಾರ ಕೇಂದ್ರ ದಲ್ಲಿ ಅಧಿಕಾರಕ್ಕೆ ಬರಬೇಕು. ಸ್ವಾತಂತ್ರ್ಯ ಸಿಕ್ಕ ನಂತರ ಕಾಂಗ್ರೆಸ್‌ ಅನ್ನು ವಿಸರ್ಜನೆ ಮಾಡಬೇಕು ಎಂದು ಮಹಾತ್ಮ ಗಾಂಧೀಜಿ ಹೇಳಿದ್ದರು. ಆದರೆ ಕಾಂಗ್ರೆಸಿ ಗರು ಆ ಕೆಲಸ ಮಾಡಲಿಲ್ಲ. ಈಗ ದೇಶದ ಜನರೇ ಕಾಂಗ್ರೆಸ್‌ ಪಕ್ಷವನ್ನು ವಿಸರ್ಜನೆ ಮಾಡಲಿದ್ದಾರೆ ಎಂದರು.ಬಿಜೆಪಿಗೆ ರಾಜ್ಯದಲ್ಲಿ ಶೇ 46ರಷ್ಟು ಮತ ಸಿಗಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಬಿಜೆಪಿ ಉತ್ತಮ ಸಾಧನೆ ಮಾಡಲಿದ್ದು 20 ಕ್ಕಿಂತ ಅಧಿಕ ಸ್ಥಾನಗಳನ್ನು ಗಳಿಸಲಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಉಡುಪಿ ಸಾಕಷ್ಟು ಅಭಿವೃದ್ಧಿ ಆಗಿದೆ. ರಾಜ್ಯದ ಬೇರೆ ಸ್ಥಳಗಳಲ್ಲಿಯೂ ಉಡುಪಿ ನಗರದ ಅಭಿವೃದ್ಧಿ ಬಗ್ಗೆ ಚರ್ಚೆ ಆಗುತ್ತಿದೆ. ಉಡುಪಿ– ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಪರವಾದ ಒಲವು ಕಾಣುತ್ತಿದೆ. ನನಗಿಂತಲೂ ಅಧಿಕ ಮತಗಳ ಅಂತರದಿಂದ ಶೋಭಾ ಕರಂದ್ಲಾಜೆ ಅವರು ಗೆಲವು ಸಾಧಿಸಲಿದ್ದಾರೆ ಎಂದರು.‘ಕಾಂಗ್ರೆಸ್‌ ಆಡಳಿತದ ಅವಧಿಯಲ್ಲಿ ದೇಶ ಅಭದ್ರ ಸ್ಥಿತಿಗೆ ತಲುಪಿದೆ. ಅತಿ ಕ್ರಮಣಗಳು ಹೆಚ್ಚಾಗುತ್ತಿವೆ. ದೇಶದ ಸೈನಿಕರ ಹತ್ಯೆ ಮಾಡಿದರೂ ಅದನ್ನು ಪ್ರಧಾನಮಂತ್ರಿ ಮನಮೋಹನ್‌ ಸಿಂಗ್‌ ಪ್ರಶ್ನಿಸುತ್ತಿಲ್ಲ. ಭಯೋತ್ಪಾದನೆಗೆ ತಕ್ಕ ಉತ್ತರ ನೀಡಲು ಸರ್ಕಾರಕ್ಕೆ ಸಾಧ್ಯ ವಾಗುತ್ತಿಲ್ಲ’ ಎಂದು ಶೋಭಾ ಕರಂದ್ಲಾಜೆ ಹೇಳಿದರು.ಮಾಜಿ ಸಚಿವ ವಸಂತ್‌ ವಿ ಸಾಲಿ ಯಾನ್‌ ಮತ್ತು ವಿವಿಧ ಪಕ್ಷಗಳ ಮುಖಂಡರು ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆ ಯಾದರು.

ಶಾಸಕರಾದ ಸಿ.ಟಿ.ರವಿ, ಡಿ.ಎನ್‌. ಜೀವ ರಾಜ್‌, ಕೋಟ ಶ್ರೀನಿವಾಸ ಪೂಜಾರಿ, ವಿ. ಸುನಿಲ್‌ ಕುಮಾರ್‌, ಭಾರತಿ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್‌ ಮೆಂಡನ್‌, ಕೆ. ರಘುಪತಿ ಭಟ್‌, ಸುರೇಶ್‌, ಮುಖಂಡರಾದ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಕೆ. ಉದಯ್ ಕುಮಾರ್‌ ಶೆಟ್ಟಿ, ಶ್ಯಾಮಲಾ ಕುಂದರ್‌, ರಾಘವೇಂದ್ರ ಕಿಣಿ, ಶೀಲಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.