ಮಂಗಳವಾರ, ಜೂನ್ 15, 2021
20 °C

ರಾಜ್ಯದ ನಾಲ್ಕು ಸೇರಿದಂತೆ 58 ಕ್ಷೇತ್ರ: ಮಾ.30ಕ್ಕೆ ರಾಜ್ಯಸಭಾ ಚುನಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕದ ನಾಲ್ವರು ಸೇರಿದಂತೆ 15 ರಾಜ್ಯಗಳ 58 ರಾಜ್ಯಸಭಾ ಸದಸ್ಯರು ಏಪ್ರಿಲ್ ಮೊದಲ ವಾರ ನಿವೃತ್ತರಾಗುತ್ತಿದ್ದಾರೆ. ಈ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗ ಶನಿವಾರ ವೇಳಾಪಟ್ಟಿ ಪ್ರಕಟಿಸಿದೆ.

ವಿಧಾನಸಭೆಗಳಿಂದ ರಾಜ್ಯಸಭೆಗೆ ನಡೆಯುವ ಈ ಚುನಾವಣೆಗೆ ಮಾರ್ಚ್ 30ರಂದು ಮತದಾನ ನಡೆಯಲಿದೆ.

ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಕೆ.ರೆಹಮಾನ್ ಖಾನ್, ಕೆ.ಬಿ.ಶಾಣಪ್ಪ, ರಾಜೀವ್ ಚಂದ್ರಶೇಖರ್ ಮತ್ತು ಹೇಮಮಾಲಿನಿ ಅವರ ಸ್ಥಾನಗಳು ತೆರವಾಗಲಿವೆ.ಉಳಿದಂತೆ ಆಂಧ್ರಪ್ರದೇಶ, ಬಿಹಾರ, ಛತ್ತೀಸ್‌ಗಡ, ಗುಜರಾತ್, ಹರ್ಯಾಣ, ಹಿಮಾಚಲ ಪ್ರದೇಶ, ಜಾರ್ಖಂಡ್, ಮಧ್ಯಪ್ರದೇಶ, ಮಹಾರಾಷ್ಟ್ರ, ಉತ್ತರಪ್ರದೇಶ, ಉತ್ತರಾಖಂಡ, ಪಶ್ಚಿಮ ಬಂಗಾಳ, ಒಡಿಶಾ ಮತ್ತು ರಾಜಸ್ತಾನಗಳಲ್ಲಿ ಚುನಾವಣೆ ನಡೆಯಲಿದೆ. ಚುನಾವಣೆಗೆ ಮಾ.12ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಮಾ.19 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಮಾ.20ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂದಕ್ಕೆ ಪಡೆಯಲು ಮಾ.22 ಅಂತಿಮ ದಿನ. ಮಾ.30ರಂದು ಬೆಳಿಗ್ಗೆ 9ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಅದೇ ದಿನ ಸಂಜೆ ಐದು ಗಂಟೆಗೆ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.