ಚೆನ್ನೈ (ಪಿಟಿಐ): ಕಾವೇರಿ ಜಲಾಶಯದಿಂದ ನೀರು ಬಿಡಲು ನಿರಾಕರಿಸಿರುವ ಕರ್ನಾಟಕದ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ತಮಿಳುನಾಡು ಸರ್ಕಾರ ಶುಕ್ರವಾರ ನಿರ್ಧರಿಸಿದೆ.

ಕಾವೇರಿ ನದಿ ನೀರು ನ್ಯಾಯಮಂಡಳಿ ಐತೀರ್ಪು ಜಾರಿ ಸಂಬಂಧ ಎರಡು ಶಾಸನಬದ್ಧ ಸಂಸ್ಥೆ ರಚನೆಗೆ ನಿರ್ದೇಶನ ನೀಡಬೇಕೆಂದು ಕೋರಿ ಮತ್ತೊಂದು ಅರ್ಜಿ ಸಲ್ಲಿಸಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ತಿಳಿಸಿದ್ದಾರೆ.

ಕಾವೇರಿ ಮೇಲುಸ್ತುವಾರಿ ಸಮಿತಿಯನ್ನು ಸರಿಯಾಗಿ ರಚಿಸಿಲ್ಲ. ಆದ್ದರಿಂದ ಸಮಿತಿ ಯಾವುದೇ ನಿರ್ಣಯ ತೆಗೆದುಕೊಳ್ಳುವಂತಿಲ್ಲ ಎಂಬ ಕಾರಣ ನೀಡಿ ನೀರು ಬಿಡಲು ನಿರಾಕರಿಸಿರುವ ಕರ್ನಾಟಕದ ನಿಲುವನ್ನು ಜಯಲಲಿತಾ ತೀವ್ರವಾಗಿ ಖಂಡಿಸಿದ್ದಾರೆ.

ಕರ್ನಾಟಕದ ಜಲಾಶಯಗಳಿಂದ ಕಾವೇರಿ ನೀರು ಬಿಡಬೇಕೆಂಬ ತಮಿಳುನಾಡಿನ ಬೇಡಿಕೆಯನ್ನು ಎರಡು ದಿನಗಳ ಹಿಂದೆ ನಡೆದ ಕಾವೇರಿ ಮೇಲುಸ್ತುವಾರಿ ಸಮಿತಿ ಸಭೆ ತಿರಸ್ಕರಿಸಿತ್ತು.

ನ್ಯಾಯಮಂಡಳಿ ಐತೀರ್ಪು ಜಾರಿಗೊಳಿಸಲು ತಕ್ಷಣವೇ ಕಾವೇರಿ ನಿರ್ವಹಣಾ ಮಂಡಳಿ (ಸಿಎಂಬಿ) ಮತ್ತು ಕಾವೇರಿ ನೀರು ಪ್ರಾಧಿಕಾರ ಸಮಿತಿ (ಸಿಡಬ್ಲ್ಯುಆರ್ಸಿ) ರಚಿಸುವಂತೆ ಕೋರಿ ಪ್ರತ್ಯೇಕ ಅರ್ಜಿ ಸಲ್ಲಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಜಯಾ ತಿಳಿಸಿದ್ದಾರೆ.

`ಮೇಲುಸ್ತುವಾರಿ ಸಮಿತಿಯನ್ನು ಕರ್ನಾಟಕದ ಸಹಮತದ ಬಳಿಕವೇ ರಚಿಸಲಾಗಿದೆ. ಆದರೆ, ಸಮಿತಿಯನ್ನು ಸೂಕ್ತ ರೀತಿಯಲ್ಲಿ ರಚಿಸಿಲ್ಲ. ಹೀಗಾಗಿ ಅದು ಯಾವುದೇ ರೀತಿಯ ತೀರ್ಮಾನ ತೆಗೆದುಕೊಳ್ಳುವಂತಿಲ್ಲ ಎಂದು ನೆರೆಯ ರಾಜ್ಯ ತಗಾದೆ ತೆಗೆದಿದೆ. ತಮಿಳುನಾಡಿಗೆ ನೀರು ಬಿಡಲು ಕರ್ನಾಟಕಕ್ಕೆ ಇಷ್ಟವಿಲ್ಲ ಎನ್ನುವುದು ಇದರಿಂದ ಗೊತ್ತಾಗುತ್ತದೆ' ಎಂದು ಜಯಲಲಿತಾ ಆರೋಪ ಮಾಡಿದ್ದಾರೆ.

ಮಧ್ಯಮ ಅವಧಿಯ `ಕುರುವೈ' ಬೆಳೆ ರಕ್ಷಣೆಗೆ ಕರ್ನಾಟಕದಿಂದ ನೀರು ಪಡೆಯಲು ರಾಜ್ಯ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ ಎಂದು ತಮಿಳುನಾಡಿನ ರೈತರಿಗೆ ಅವರು ಭರವಸೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.