ಶನಿವಾರ, ಮಾರ್ಚ್ 6, 2021
24 °C

ರಾಜ್ಯದ ವಿವಿಧೆಡೆ ಎಟಿಎಸ್‌ ದಾಳಿ: ನಾಲ್ವರು ಶಂಕಿತ ಉಗ್ರರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜ್ಯದ ವಿವಿಧೆಡೆ ಎಟಿಎಸ್‌ ದಾಳಿ: ನಾಲ್ವರು ಶಂಕಿತ ಉಗ್ರರ ಬಂಧನ

ಬೆಂಗಳೂರು: ಗುರುವಾರ ತಡ ರಾತ್ರಿ ಬೆಂಗಳೂರು, ಮಂಗಳೂರು ಮತ್ತು ತುಮಕೂರಿನಲ್ಲಿ ಭಯೋತ್ಪಾದನಾ ನಿಗ್ರಹ ದಳದ (ಎಟಿಎಸ್‌) ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ ಒಟ್ಟು ನಾಲ್ವರು ಶಂಕಿತ ಉಗ್ರರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಬಂಧಿತ ನಾಲ್ವರು ಐಎಸ್‌ ಭಯೋತ್ಪಾದನೆ ಸಂಘಟನೆ ಜತೆಗೆ ಸಂಪರ್ಕ ಹೊಂದಿದ್ದರು. ಐಎಸ್‌ ಸೇರಲು ರಾಜ್ಯದ ಯುವಕರನ್ನು ಪ್ರೇರೇಪಿಸುತ್ತಿದ್ದರು ಮತ್ತು ಗಣರಾಜ್ಯೋತ್ಸವ ಸಂದರ್ಭದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂದು ಮೂಲಗಳು ಹೇಳಿವೆ. ಇವರು ಬಳಸುತ್ತಿದ್ದ ಇಮೇಲ್‌ ಮತ್ತು ದೂರವಾಣಿ ಕರೆಗಳ ಜಾಡು ಹಿಡಿದು ಬಂಧಿಸಲಾಗಿದೆ ಎಂದು ಮೂಲಗಳು ಹೇಳಿವೆ.ಮಂಗಳೂರಿನ ಬಜ್ಪೆಯಲ್ಲಿ, ತುಮಕೂರಿನ ಗುಮ್ನಿ ಸರ್ಕಲ್‌ ಬಳಿ ಮತ್ತು ಬೆಂಗಳೂರಿನ ಸರ್ಜಾಪುರ ರಸ್ತೆಯ ಜಕ್ಕಸಂದ್ರ ಬಳಿ ಇವರನ್ನು ವಶಕ್ಕೆ ಪಡೆಯಲಾಗಿದೆ.ಅಲ್ ಕೈದಾ ಭಯೋತ್ಪಾದನಾ ಸಂಘಟನೆ ಜತೆ ನಂಟು ಹೊಂದಿದ್ದಾರೆ ಎಂಬ  ಆರೋಪದಡಿ ಇತ್ತೀಚೆಗಷ್ಟೇ ಬೆಂಗಳೂರಿನ ಮೌಲಾನಾ ಸೈಯದ್ ಅನ್ಸರ್ ಶಾ ಖಾಸ್ಮಿ ಎಂಬ ಮೌಲ್ವಿಯನ್ನು ಎಟಿಎಸ್ ವಶಕ್ಕೆ ತೆಗೆದುಕೊಂಡಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.