ಗುರುವಾರ , ಜೂನ್ 17, 2021
22 °C

ರಾಜ್ಯದ ಹಿತಾಸಕ್ತಿ ಮರೆತ ಕೇಂದ್ರ ಸಚಿವರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೇಲೂರು: `ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕೇಂದ್ರದ ನಾಲ್ವರು ಸಚಿವರು ರಾಜ್ಯದ ಹಿತಾಸಕ್ತಿ ಕಾಪಾಡಲು ವಿಫಲರಾಗಿದ್ದಾರೆ~ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಮಂಗಳವಾರ ಆರೋಪಿಸಿದರು.ಚಿಕ್ಕಮಗಳೂರು-ಉಡುಪಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೇಲೂರಿನ ವೈ.ಡಿ.ಡಿ. ಕಾಲೇಜು ಬಳಿ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅವರು, ಉಡುಪಿ-ಚಿಕ್ಕಮಗಳೂರು ಲೋಕಸಭೆ ಚುನಾವಣಾ ಫಲಿತಾಂಶ ಕೇವಲ ತಾತ್ವಿಕ ಹೋರಾಟ, ಕೇಂದ್ರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದಿದ್ದಾರೆ. ಆದರೆ ತಾತ್ವಿಕ, ನಗಣ್ಯ ಎಂದು ಹೇಳುವುದು ಪ್ರಜಾಪ್ರಭುತ್ವದ ಮೌಲ್ಯ ಕಡೆಗಣಿಸುವುದಾಗಿದೆ ಎಂದರು. ನಾಲ್ವರು ಸಚಿವರು ಕ್ಷೇತ್ರದಲ್ಲಿಯೇ ಮೊಕ್ಕಾಂ ಹೂಡಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಕಡೂರು- ಚಿಕ್ಕಮಗಳೂರು ರೈಲು ಮಾರ್ಗ ನೆನೆಗುದಿಗೆ ಬಿದ್ದಿತ್ತು. ಆದರೆ ತಾವು ಲೋಕಸಭಾ ಸದಸ್ಯರಾದ ನಂತರ ಈ ಯೋಜನೆ ಕಾರ್ಯರೂಪಕ್ಕೆ ಬಂತು. ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ತಾವು ಈಗಾಗಲೇ 2-3 ಪ್ರಚಾರ ಸಭೆಗಳನ್ನು ನಡೆಸಿದ್ದು, ಜನರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ ಎಂದರು.ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರೊಂದಿಗೆ ಅಬಕಾರಿ ಸಚಿವ ರೇಣುಕಾಚಾರ್ಯ ಹೆಲಿಕಾಪ್ಟರ್‌ನಲ್ಲಿ ಪ್ರಯಾಣ ಬೆಳೆಸಿದರು.ಜಿಲ್ಲಾಧಿಕಾರಿ ಮೋಹನ್‌ರಾಜ್, ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಅಮಿತ್‌ಸಿಂಗ್, ತಹಶೀಲ್ದಾರ್ ಎನ್. ಎಸ್. ಚಿದಾನಂದ್, ಲೋಕೋಪಯೋಗಿ ಕಾರ್ಯಪಾಲಕ ಎಂಜಿನಿಯರ್ ರಾಮಚಂದ್ರ, ತಾಲ್ಲೂಕು ಬಿಜೆಪಿ ಅಧ್ಯಕ್ಷ ರೇಣುಕುಮಾರ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಅಭಿಗೌಡ, ವಿಕ್ರಂ ಹಾಜರಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.